ರಾಜ್ಯ ಸುದ್ದಿಗಳು
ದೇವನಹಳ್ಳಿ
ಪಟ್ಟಣದ ತಾಲೂಕು ಆಡಳಿತ ಆವರಣದಲ್ಲಿ ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈಗಾಗಲೇ ಕೊರೊನಾ ಎರಡನೇ ಅಲೆಯಲ್ಲಿ ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮದ ಮೂಲಕ ಎಲ್ಲಾ ಹಳ್ಳಿಗಳ ಮನೆ ಬಾಗಿಲಿಗೆ ತೆರಳಿ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಲಾಗಿತ್ತು. ಇದೀಗ ೩ನೇ ಅಲೆಯಲ್ಲಿ ಕೋವಿಡ್ ನಿಯಂತ್ರಿಸಲು ವೈದ್ಯರನ್ನು ಹಳ್ಳಿಗಳಿಗೆ ಭೇಟಿ ನೀಡಿ ಪ್ರತಿ ಮನೆಯ ಬಾಗಿಲಿಗೆ ತೆರಳಿ ಕೋವಿಡ್ ಲಸಿಕೆ ಮತ್ತು ಕೋವಿಡ್ ನಿಯಂತ್ರಣದ ಬಗ್ಗೆ ಮಾಹಿತಿ ನೀಡಲಾಗುವ ಕಾರ್ಯಕ್ರಮವನ್ನು ಮಾಡಲಾಗಿದೆ. ಕೋವಿಡ್ ಸೋಂಕಿತರು ಹೆಚ್ಚು ಹೋಂ ಐಸೋಲೇಷನ್‌ನಲ್ಲಿರುತ್ತಾರೆ. ಅಂತಹವರ ಮನೆಗೆ ಭೇಟಿ ನೀಡಿ ಅವರಿಗೆ ಸೂಕ್ತ ಚಿಕಿತ್ಸೆ ಮತ್ತು ಔಷಧಿಯನ್ನು ನೀಡುವುದರ ಮೂಲಕ ಆರೋಗ್ಯ ನಿಗಾವನ್ನು ವಹಿಸಲಾಗುತ್ತಿದೆ.
ಜಿಲ್ಲಾ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ ಮಾತನಾಡಿ, ಶಾಲಾ ಮಕ್ಕಳಲ್ಲಿಯೂ ಕೋವಿಡ್ ಪಾಸಿಟಿವಿಟಿ ಕಂಡುಬರುತ್ತಿರುವುದರಿಂದ ಎಲ್ಲಾ ರೀತಿಯಲ್ಲಿ ಆರೋಗ್ಯ ಇಲಾಖೆಯಿಂದ ಸೂಕ್ತ ರಕ್ಷಣೆ ಮತ್ತು ಆರೋಗ್ಯ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲಿ ಮಕ್ಕಳಲ್ಲಿ ಕೊರೊನಾದಿಂದ ಬಳಲುವಂತೆ ಕಾಣಿಸುತ್ತಿಲ್ಲ. ಯಾವುದೇ ಮಕ್ಕಳಿಗೆ ತೊಂದರೆಯೂ ಆಗಿರುವುದಿಲ್ಲ. ವೈರಲ್ ಫೀವರ್ ತರ ಬಂದು ಹೋಗುತ್ತಿದೆ. ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಬಿಎಸ್‌ಎಫ್ ಕ್ಯಾಂಪಸ್‌ಗೂ ಸಹ ಭೇಟಿ ನೀಡಿದ್ದೇವೆ. ಆಗ ಪ್ರಕರಣ ಇತ್ತು. ಇತ್ತೀಚೆ ಪಾಸಿಟಿವಿ ಹೆಚ್ಚಾಗುತ್ತಿದ್ದರೆ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ವೈದ್ಯಾಧಿಕಾರಿಗಳು, ಆರೋಗ್ಯ ಸಹಾಯಕಿಯರು, ವಾಹನ ಚಾಲಕರು ಇದ್ದರು.
Be the first to comment