ಗ್ರಾಪಂ ಅಧ್ಯಕ್ಷರಿಂದ ೨.೫ಲಕ್ಷ ರೂ. ವೆಚ್ಚದಲ್ಲಿ ಚರಂಡಿ ಕಾಮಗಾರಿ ಪರಿಶೀಲನೆ 

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಕನ್ನಮಂಗಲ ಗ್ರಾಪಂ ವ್ಯಾಪ್ತಿಯ ಪೂಜನಹಳ್ಳಿ ಗ್ರಾಮದಲ್ಲಿ ಸುಮಾರು 2.5ಲಕ್ಷ ವೆಚ್ಚದಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು ಅದನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಗ್ರಾಪಂ ಅಧ್ಯಕ್ಷ ಕೆ.ಆರ್.ನಾಗೇಶ್ ತಿಳಿಸಿದರು.ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಕನ್ನಮಂಗಲ ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಪೂಜನಹಳ್ಳಿ ಗ್ರಾಮವೊಂದಕ್ಕೆ ಒಟ್ಟು ಸುಮಾರು 12ಲಕ್ಷ ರೂ. ಪಂಚಾಯಿತಿ ಅನುದಾನದಲ್ಲಿ ಕ್ರಿಯಾಯೋಜನೆ ರೂಪಿಸಲಾಗಿದೆ. ಅದರಲ್ಲಿ ಈ ಕಾಮಗಾರಿ ತುಂಬ ತುರ್ತು ಇದ್ದಿದ್ದರಿಂದ ಈ ರಸ್ತೆಯಲ್ಲಿ ಬೃಹತ್ ವಾಹನಗಳ ಸಂಚಾರ ಇರುವುದರಿಂದ ಬೇಗ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೨ಕೋಟಿರೂ.ಗಳಷ್ಟು ಕ್ರಿಯಾಯೋಜನೆ ರೂಪಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಎಲ್ಲಾ ಗ್ರಾಮಗಳಲ್ಲಿಯೂ ಕಾಮಗಾರಿಗಳು ಸರಾಗವಾಗಿ ನಡೆಯುತ್ತಿವೆ.

CHETAN KENDULI

ಇದರ ಜತೆಗೆ ನೈರ್ಮಲ್ಯ ಯೋಜನೆಯ ಮೂಲಕ ಸ್ವಚ್ಛತೆಗೆ ೪೦ಲಕ್ಷ ರೂ. ಕ್ರಿಯಾಯೋಜನೆಯನ್ನು ರೂಪಿಸಿ ಅದನ್ನು ಸಹ ನೆರವೇರಿಸಲಾಗುತ್ತಿದೆ. ಕನ್ನಮಂಗಲ ಗ್ರಾಪಂ ಕಟ್ಟಡದ ಮೊದಲ ಮಹಡಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ಡಿಜಿಟಲ್ ಗ್ರಂಥಾಲಯವನ್ನು ಸಹ ಮಾಡುವ ಯೋಜನೆ ಇದೆ ಎಂದು ಹೇಳಿದರು.ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಮಾತನಾಡಿ, ಗ್ರಾಪಂ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ಯಾವುದೇ ಕಳಪೆ ಆಗದಂತೆ ಎಚ್ಚರ ವಹಿಸಲಾಗುತ್ತಿದೆ. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಈಗಾಗಲೇ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಆದಷ್ಟು ಬೇಗ ಕಾಮಗಾರಿಗಳು ಪೂರ್ಣಗೊಂಡು ಕನ್ನಮಂಗಲ ಗ್ರಾಪಂ ಮಾದರಿಯನ್ನಾಗಿಸಲು ಎಲ್ಲಾ ಸದಸ್ಯರ ಸಹಕಾರ ಇದೆ. ದಿನ ಕಳೆದಂತೆ ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದರು. ಈ ವೇಳೆಯಲ್ಲಿ ಪಿಡಿಒ ಆದರ್ಶ್‌ಕುಮಾರ್, ಗುತ್ತಿಗೆದಾರರು ಇದ್ದರು.

Be the first to comment

Leave a Reply

Your email address will not be published.


*