ರಾಜ್ಯ ಸುದ್ದಿಗಳು
ದೇವನಹಳ್ಳಿ
ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಯಲ್ಲಿ ಶೇ.25ರಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಸಹಾಯಧನದ ಚೆಕ್ ಅನ್ನು ಗ್ರಾಪಂ ಅಧ್ಯಕ್ಷೆ ದೀಪ್ತಿ ವಿಜಯ್‌ಕುಮಾರ್ ವಿತರಿಸಿದರು. ಸುಮಾರು 20ಲಕ್ಷ ರೂ.ಗಳ ಅನುದಾನವನ್ನು ಜಾಲಿಗೆ ಗ್ರಾಪಂ ವ್ಯಾಪ್ತಿಯ ಬಸವನಪುರ ಗ್ರಾಮದ ಬಡ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ 38 ಫಲಾನುಭವಿಗಳಿಗೆ ತಲಾ 5 ಸಾವಿರ ರೂ.ಗಳ ಚೆಕ್‌ಅನ್ನು ಹಸ್ತಾಂತರಿಸಲಾಗುತ್ತಿದೆ. ಈ ಹಿಂದೆ ಇದೇ ಫಲಾನುಭವಿಗಳಿಗೆ ಅಕ್ರಮ ಸಕ್ರಮ ಅಡಿಯಲ್ಲಿ ನಿವೇಶನ ಮಂಜೂರು ಮಾಡಲಾಗಿತ್ತು. ಇದೀಗ ಗ್ರಾಪಂನ ನಿಧಿಯಿಂದ ಫಲಾನುಭವಿಗಳಿಗೆ ಸಹಾಯಧನವನ್ನು ನೀಡಲಾಗುತ್ತಿದೆ. ಫಲಾನುಭವಿಗಳು ಇದರ ಸದುಪಯೋಗವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಗ್ರಾಪಂ ಉಪಾಧ್ಯಕ್ಷ ಬಾಲಸುಬ್ರಮಣ್ಯ ಮಾತನಾಡಿ, ಈ ಹಿಂದೆ ಇದ್ದಂತಹ ಆಡಳಿತ ಮಂಡಳಿಯಲ್ಲಿ ಬಸವನಪುರ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳನ್ನು ಗುರ್ತಿಸಲಾಗಿತ್ತು. ಆದರೆ ಮಂಜೂರು ಮಾಡಿರಲಿಲ್ಲ. ಅದರಂತೆ ಈಗಿರುವ ಆಡಳಿತ ಮಂಡಳಿ ತೀರ್ಮಾನದಂತೆ ಬಸವನಪುರ ಗ್ರಾಮದ ಸದಸ್ಯೆ ವಿಜಯರಾಘವೇಂದ್ರ ಅವರ ಸಮ್ಮುಖದಲ್ಲಿ ಚೆಕ್‌ಅನ್ನು ವಿತರಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು. ಈ ವೇಳೆಯಲ್ಲಿ ಗ್ರಾಪಂ ಸದಸ್ಯೆ ವಿಜಯರಾಘವೇಂದ್ರ, ಪಿಡಿಒ ಎಸ್.ಎಸ್.ಮೋಹನ್‌ಕುಮಾರ್, ಸಿಬ್ಬಂದಿಗಳಾದ ಆನಂದ್, ಎಂ.ಮುನಿರಾಜ್, ಭಾಗ್ಯಶ್ರೀ ಹಾಗೂ ಫಲಾನುಭವಿಗಳು ಇದ್ದರು.
Be the first to comment