ರಾಜ್ಯ ಸುದ್ದಿಗಳು
ಬೆಂಗಳೂರು:
ಇಂದು ರಾಜ್ಯದ ಕೋವಿಡ್ 19 ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ರಾಜ್ಯದಲ್ಲಿ ಕೆಲ ಶರತ್ತುಗಳನ್ನು ವಿಧಿಸಿ ವೀಕೆಂಡ್ ಕರ್ಫ್ಯೂ ಕೈಬಿಡುವ ನಿರ್ಧಾರ ಮಾಡಿದರು.
ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದರ ಗೃಹ ಸಚಿವ ಆರ್. ಅಶೋಕ, ರಾಜ್ಯದಲ್ಲಿ ವಿಧಿಸಿದ ವೀಕೆಂಡ್ ಕರ್ಫ್ಯೂವನ್ನು ವಿವಿಧ ತಜ್ಞರ ತಂಡದೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಎಲ್ಲರ ಸಲಹೆ ಸೂಚನೆಗಳನ್ನು ತೆಗೆದುಕೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ಇದಕ್ಕೆ ಕೆಲ ಷರತ್ತುಗಳನ್ನು ಮಾಡಲಾಗಿದೆ ಎಂದು ಹೇಳಿದರು.
ಯಾವ ಷರತ್ತುಗಳು:
ರಾಜ್ಯದ ಆಸ್ಪತ್ರೆಗಳಲ್ಲಿ ರೋಗಿಗಳ ಬರುವಿಕೆ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಾದರೆ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಇನ್ನು ಶನಿವಾರ ಹಾಗೂ ಭಾನುವಾರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತೆ ಎಂದು ಅವರು ತಿಳಿಸಿದರು.
ಶುಕ್ರವಾರ ನಡೆದ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಡಾ. ಕೆ. ಸುಧಾಕರ್, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋವಿಡ್ ಸ್ಥಿತಿ ಗತಿ ಕುರಿತು ನಡೆಸಿದ ಪರಿಶೀಲನಾ ಸಭೆಯ ಮುಖ್ಯಾಂಶಗಳು:
1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ
2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯು ನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್ ನಲ್ಲಿ ಇದ್ದಾರೆ.
3. ಬೆಂಗಳೂರನ್ನು ಹೊರತು ಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗಿವೆ.
4. ಪಾಸಿಟಿವಿ ದರ ಶೇ. 19.94 ರಷ್ಟಿದೆ.
5. ಮಕ್ಕಳ ಪಾಸಿಟಿವಿಟಿ ದರ ಶೇ.8 ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ ದರ ಶೇ. 16.57 ರಷ್ಟಿದೆ.
6. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ.
7. ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್ಎ ಪ್ಲಾಂಟ್ ಗಳ ಪೈಕಿ 225 ಕಾರ್ಯಾರಂಭ ಮಾಡಿವೆ.
8. ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್ ಎ ಪ್ಲಾಂಟ್ ಗಳು ಕಾರ್ಯಾರಂಭಮಾಡಿವೆ.
9. ಸರಾಸರಿ ಮೂರು ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ.
10. ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ.
11. ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.
12. ವಾರಾಂತ್ಯ ಕರ್ಫ್ಯೂ ವಿಧಿಸಿದರು ಕೂಡ ದೊಡ್ಡ ಪರಿಣಾಮ ಉಂಟಾಗಿಲ್ಲ. ಸೊಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಹೆಚ್ಚಾದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಶೇ. 5 ರಿಂದ 6ರ ಮದ್ಯದಲ್ಲಿದೆ. ಚೇತರಿಸಿಕೊಳ್ಳುತ್ತಿರುವ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.
13. ಆದರೆ ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ (peak) ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
14. ಜೊತೆಗೆ ಕೋವಿಡ್ 19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿರುವುದನ್ನು ಗಮನಿಸಲಾಯಿತು.
15. ಜನರ ಜೀವ ಮತ್ತು ಜೀವನ ನಿರ್ವಹಣೆ ಎರಡೂ ಸರಿದೂಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
16. ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು:-
17. ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ಜಾರಿಯಲ್ಲಿರಲಿದೆ.
18. ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂ ವನ್ನು ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ ಮುಂದಿನವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.
19. ಆದ್ದರಿಂದ ಸಾರ್ವಜನಿಕಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತಿ ಅಗತ್ಯವಾಗಿದೆ.
20. ಮಾಲ್, ಹೋಟೆಲ್, ಬಾರ್, ಕ್ಲಬ್,ಪಬ್ ಗಳು ಶೇ. 50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಯಿತು. ಎರಡೂ ಲಸಿಕೆ ಪಡೆಯುವುದು ಕಡ್ಡಾಯ.
Be the first to comment