ಮಾಜಿ ಪ್ರಧಾನಿ ದೇವೇಗೌಡರಿಗೆ ಕರೋನ ಪಾಸಿಟಿವ್

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

ಬೆಂಗಳೂರು

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಜ.15ಕ್ಕೆ ದೇವೇಗೌಡರ ಸೊಸೆ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿಗೆ ಕೊರೊನಾ ಸೋಂಕು ತಗುಲಿತ್ತು. ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆದಿದ್ದರು

CHETAN KENDULI

ಮಾಜಿ ಪ್ರಧಾನಿ ದೇವೇಗೌಡರು ಶೀಘ್ರ ಗುಣಮುಖರಾಗಲೆಂದು ವಿವಿಧ ಪಕ್ಷಗಳ ನಾಯಕರು, ಧರ್ಮ ಗುರುಗಳು, ಅಭಿಮಾನಿಗಳು ಹಾರೈಸಿದ್ದಾರೆ.ಗುಣಮುಖರಾದ ಸಿಎಂ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಕೊರೊನಾ ದೃಢಪಟ್ಟಿತ್ತು. ಆದರೆ ಜ.17ರಂದು ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ಇದೆ. ಬೊಮ್ಮಾಯಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ರಕ್ತದೊತ್ತಡ, ಶುಗರ್, ರಕ್ತ ಹೆಪ್ಪುಕಟ್ಟುವುದಕ್ಕೆ ಸಂಬಂಧಿಸಿದಂತೆ ಹಲವು ತಪಾಸಣೆಗಳನ್ನು ನಡೆಸಲಾಗಿತ್ತು. ಡಿ-ಡೈಮರ್ ಟೆಸ್ಟ್​ ಹಾಗೂ ಶ್ವಾಸಕೋಶ ಎಕ್ಸ್​ರೇ ತೆಗೆಸಲಾಗಿದೆ. ಇಸಿಜಿ ಹಾಗೂ ಇಕೋ ಟೆಸ್ಟ್​ ಮಾಡಿ ಹೃದಯದ ಆರೋಗ್ಯ ತಪಾಸಣೆ ಮಾಡಿದ್ದರು.

Be the first to comment

Leave a Reply

Your email address will not be published.


*