ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ಐದು ತಿಂಗಳ ನಂತರ ಕೊನೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಗೆ ಸಿ.ಸಿ.ಪಾಟೀಲರನ್ನು ನೂತನ ಉಸ್ತುವಾರಿ ಸಚಿವರನ್ನಾಗಿ ನೇಮಕಮಾಡಲಾಗಿದೆ.
ಸರ್ಕಾರದಿಂದ ಹೊರಬಿದ್ದ ಆದೇಶ. ಸಚಿವ ಗೋವಿಂದ ಕಾರಜೋಳ ಅವರಿಗೆ ಬೆಳಗಾವಿ ಹಾಗೂ ಸಚಿವ ಮುರುಗೇಶ ನಿರಾಣಿ ಅವರಿಗೆ ಕಲಬುರಗಿ ಉಸ್ತುವಾರಿಯ ಹೊಣೆಗಾರಿಕೆ ಮುಂದುವರಿಕೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಐದು ತಿಂಗಳ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಿದೆ. ಇಷ್ಟು ದಿನ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್ 1ರಂದು ಧ್ವಜಾರೋಹಣ ಮಾಡಲು ಮಾತ್ರ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು. ಇದೀಗ ಪೂರ್ಣ ಪ್ರಮಾಣದಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ.
Be the first to comment