ಬಿಜ್ಜವಾರ ಗ್ರಾಮ ಪಂಚಾಯಿತಿಯ 2021-22 ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯಲ್ಲಿ ಮಾಹಿತಿ ನೀಡಿದರೆ ಕಷ್ಟಕ್ಕೆ ತಕ್ಷಣ ಸ್ಪಂದಿಸುತ್ತೇನೆ ಶಾಸಕ ನಿಸರ್ಗ ನಾರಾಯಣಸ್ವಾಮಿ

ವರದಿ ಗುರುಮೂರ್ತಿ ಬೂದಿಗೆರೆ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಬಹಳಷ್ಟು ಜನರಿಗೆ ಸರ್ಕಾರದಿಂದ ಬರುವ ಸೌಲಭ್ಯಗಳ ಮಾಹಿತಿ ಕೊರತೆ ಇರುತ್ತದೆ. ಮತ್ತಷ್ಟು ಜನಕ್ಕೆ ಸರ್ಕಾರಿ ಸೌಲಭ್ಯ ಪಡೆಯುವ ಮಾರ್ಗ ತಿಳಿದಿರುವುದಿಲ್ಲ. ಶಾಸಕನಾಗಿ ಜನರ ಕಷ್ಟಕ್ಕೆ ಸ್ಪಂದಿಸಲು ಅವರಿಗೆ ಸರ್ಕಾರದ ಸೌಲಭ್ಯ ಕೊಡಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡುವುದಾಗಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

CHETAN KENDULI

ದೇವನಹಳ್ಳಿ ತಾಲ್ಲೂಕು ಬಿಜ್ಜವಾರ ಗ್ರಾಮದಲ್ಲಿ ನಡೆದ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿ, ಕೊರೊನಾದಿಂದ ಮೃತ ಪಟ್ಟ ವ್ಯಕ್ತಿಯ ಹಲವಾರು ಕುಟುಂಬಗಳಿಗೆ ಸರ್ಕಾರದಿಂದ ಸಿಗುವ ಪರಿಹಾರ ಧನ ದೊರೆತಿಲ್ಲ. ಈ ನಿಟ್ಟಿನಲ್ಲಿ ನಾನು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಪರಿಹಾರದ ಚೆಕ್ಕನ್ನು ಮನೆ ಮನೆಗೆ ತಲುಪಿಸುತ್ತಿದ್ದೇನೆ.

ಇದೇ ರೀತಿ ಸರ್ಕಾರ ಆರೋಗ್ಯದ ಹಿತದೃಷ್ಟಿಯಿಂದ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಹಲವರಿಗೆ ಮಾಹಿತಿ ಕೊರತೆ ಇದೆ. ನನ್ನ ಬಳಿ ಐವರು ಆಪ್ತ ಸಹಾಯಕರಿದ್ದು, ಯಾರಿಗಾದರೂ ಮಾಹಿತಿ ಕೊರತೆ ಇದ್ದರೆ ಅಥವಾ ಪರಿಹಾರ ತಲುಪದಿದ್ದರೆ ಒಂದು ಅರ್ಜಿ ನೀಡಿದರೂ ಸಾಕು ನಾನು ಜನರ ಕಷ್ಟಕ್ಕೆ ಸ್ಪಂದಿಸಿ ಅವರಿಗೆ ಸಿಗಬೇಕಾದನ್ನು ತಲುಪಿಸುವ ಜವಾಬ್ದಾರಿ ನಿಭಾಯಿಸುತ್ತೇನೆ. ಇಲ್ಲಿನ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮದ ಜನರ ಸಮಸ್ಯೆಗಳನ್ನು ಅರಿತು ಅದನ್ನು ಸರಿಪಡಿಸಿ, ಅಭಿವೃದ್ಧಿ ಕಾರ್ಯಗಳನ್ನು ಮಾಡುವಲ್ಲಿ ಗಮನ ಹರಿಸಿ ಎಂದು ತಿಳಿಸಿದರು.ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆ ಇಂದ ಸರ್ಕಾರ ನೀಡುತ್ತಿರುವ ಸೌಲಭ್ಯದ ಮಾಹಿತಿ ನೀಡಿದರು.ಗ್ರಾಮ ಸಭೆಯಲ್ಲಿ ಬಿಜ್ಜವಾರ ಗ್ರಾ.ಪಂ ಅಧ್ಯಕ್ಷೆ ಭಾಗ್ಯ ನಾರಾಯಣಸ್ವಾಮಿ, ಉಪಾಧ್ಯಕ್ಷ ಬಿಜ್ಜವಾರ ನಾಗರಾಜ್, ಪಿಡಿಒ ಸತೀಶ್ ಕುಮಾರ್, ನೋಡಲ್ ಆಫೀಸರ್ ಸೋಮಶೇಖರ್, ತಾಲ್ಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ಇದ್ದರು.

Be the first to comment

Leave a Reply

Your email address will not be published.


*