ಜಿಲ್ಲಾ ಸುದ್ದಿಗಳು
ಕಾರವಾರ
ಗಣರಾಜ್ಯೋತ್ಸವದ ಪ್ರಯುಕ್ತ ಇಂದು ಉತ್ತರ ಕನ್ನಡ ಜಿಲ್ಲಾಡಳಿತದ ವತಿಯಿಂದ ಧ್ವಜಾರೋಹಣ ಮಾಡಲಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀವವಾಸ ಪೂಜಾರಿ ಅವರು ಪೊಲೀಸ್ ಪರೇಡ್ನಲ್ಲಿ ಭಾಗವಹಿಸಿ, ಗೌರವ ಸ್ವೀಕರಿಸಿ, ಗಣರಾಜ್ಯೋತ್ಸವದ ಬಗ್ಗೆ ಮಾತನಾಡಿದರು. ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಲ್ವೆಕರ್ ಜನ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿ ವರ್ಗದವರು, ಪೊಲೀಸ್ ವರಿಷ್ಠಾಧಿಕಾರಿಗಳು ಸಹಿತ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
Be the first to comment