ರಾಜ್ಯ ಸುದ್ದಿಗಳು
ದೊಡ್ಡಬಳ್ಳಾಪುರ
ಸಂವಿಧಾನ ಜಾರಿಯಾದ ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರರ ಭಾವಚಿತ್ರ ತೆಗೆದರೆ ಮಾತ್ರ ತಾನು ಧ್ವಜರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿ ಅಂಬೇಡ್ಕರ್ ಭಾವಚಿತ್ರ ತೆಗೆಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವರ್ತನೆಯನ್ನು ಬಹುಜನ ಸಮಾಜ ಪಾರ್ಟಿ ಖಂಡಿಸುತ್ತದೆ ಎಂದು ರಾಜ್ಯ ನಾಯಕರು ಹಿರಿಯ ಮುಖಂಡರು ಆದ ಪುರುಷೋತ್ತಮ್ ತಿಳಿಸಿದ್ದಾರೆ.
ಭಾರತ ದೇಶದಲ್ಲಿ ಸಂಪೂರ್ಣ ಆಡಳಿತ ವ್ಯವಸ್ಥೆಯು ಬಾಬಾಸಾಹೇಬ್ ಅಂಬೇಡ್ಕರರು ಬರೆದಿರುವಂತಹ ಸಂವಿಧಾನದ ಅಡಿಯಲ್ಲಿ ನಡೆಯುತ್ತಿದ್ದು. ಕಾನೂನು ಸುವ್ಯವಸ್ಥೆ ಕಾಪಾಡುವ ನ್ಯಾಯಾಧೀಶರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅಪಾರವಾದ ಗೌರವ ಇರಬೇಕಿತ್ತು ಆದರೆ ತಮ್ಮ ಮನುವಾದಿ ಮನಸ್ಥಿತಿಯಿಂದ ಅವರು ಇನ್ನೂ ಹೊರಬಂದಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಇದು ಭಾರತ ದೇಶದ ಆಡಳಿತ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ ಕೂಡಲೇ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕೆಂದು ಮತ್ತು ಈ ಕೂಡಲೇ ನ್ಯಾಯಾಧೀಶ ಮಲ್ಲಿಕರ್ಜುನ್ ಗೌಡ ಅವರನ್ನು ವಜಾಗೊಳಿಸಬೇಕೆಂದು ಬಹುಜನ ಸಮಾಜ ಪಾರ್ಟಿ ಆಗ್ರಹಿಸುತ್ತದೆ ಎಂದು ತಿಳಿಸಿದರು. ತಕ್ಷಣ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ರವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು.
Be the first to comment