ಜಿಲ್ಲಾ ಸುದ್ದಿಗಳು
ಭಟ್ಕಳ
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಭಟ್ಕಳ ತಾಲೂಕಿನ ಮುರ್ಡೇಶ್ವರ ತುದಳ್ಳಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ 2.98 ಕೋಟಿ ವೆಚ್ಚದಲ್ಲಿ ಮತ್ತು ಭಟ್ಕಳ ತಾಲೂಕಿನ ಕಿರುಹೊಳೆ ದೇವಸ್ಥಾನ ಕ್ರಾಸ್ ನಿಂದ ಗೊರ್ಟೆ ಸಿದ್ದನಮನೆಕೇರಿ ರಸ್ತೆ ನಿರ್ಮಾಣ ಕಾಮಗಾರಿಗೆ 3.40 ಕೋಟಿ ವೆಚ್ಚದಲ್ಲಿ ಸನ್ಮಾನ್ಯ ಸಂಸದರಾದ ಶ್ರೀ ಅನಂತಕುಮಾರ್ ಹೆಗಡೆ ಅವರು ಹಾಗೂ ಸನ್ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭದಲ್ಲಿ ಭಟ್ಕಳ್ ಶಾಸಕ ಸುನೀಲ್ ನಾಯ್ಕ, ಬಿ.ಜೆ.ಪಿ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ, ಗೋವಿಂದ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
Be the first to comment