ರಾಜ್ಯ ಸುದ್ದಿಗಳು
ಮಸ್ಕಿ
ಗಣರಾಜ್ಯೋತ್ಸವದ ಧ್ವಜಾರೋಹಣ ದಿನದಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆರವುಗೊಳಿಸಿ ಅಪಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಎಫ್‌ಐಆರ್ ದಾಖಲಿ, ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ, ನಗರದ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಲ್ಲಿಕಾರ್ಜುನಾ ಗೌಡ ನ್ಯಾಯಾಧೀಶನ ವಿರುದ್ದ ಘೋಷಣೆ ಕೂಗಿದರು. ನಂತರ ಹೋರಾಟ ಭುಗಿಲೆದ್ದ ಪರಿಣಾಮ ಅಶೋಕ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು ಬಸ್ ಸಂಚಾರ ರಸ್ತೆಯ ಅಕ್ಕಪಕ್ಕದ ಬಹುತೇಕ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡು ಉದ್ರಿಕ್ತ ವಾತಾವರಣ ನಿರ್ಮಾಣಗೊಂಡಿತ್ತು.
ಇಂದು ವಿವಿಧ ಪ್ರಗತಿಪರ ಮತ್ತು ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಈ ಚಳುವಳಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡು ಎರಡು ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರ್‌ಗಳಿಗೆ ಬೆಂಕಿ ಹಚ್ಚಿ, ನ್ಯಾಯಾಧೀಶರ ವಿರುದ್ಧ ಘೋಷಣೆ ಕೂಗೂತ್ತಾ, ಪೊಲೀಸರಿಗೆ ಕಾನೂನಿನನ್ವಯ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲಾಯಿತು. ತೀವ್ರ ಹೋರಾಟದಿಂದ ನಗರದ ಅರ್ಧ ಭಾಗ ಸಬ್ಧಗೊಳ್ಳುವಂತಾಯಿತು. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಜನರು ಪರದಾಡುವಂತಾಯಿತು.
ಆಂಬ್ಯುಲೆನ್ಸ್‌ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಒದಗಿಸಿರುವುದು ಬಿಟ್ಟರೇ, ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡದಿರುವುದರಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿವಿಧ ಕೆಲಸ, ಕಾರ್ಯಗಳಿಗೆ ತೆರಳಿದ್ದ ಜನರು ಮತ್ತು ಪ್ರಯಾಣಿಕರು ನಡೆದುಕೊಂಡೇ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಪ್ರಗತಿ ಪರ ಮತ್ತು ದಲಿತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಆಕ್ರೋಶದ ಹಿನ್ನೆಲೆಯಲ್ಲಿ ನಗರದ ವಿವಿಧ ವೃತ್ತ ಸೇರಿದಂತೆ ಅನೇಕ ಕಡೆ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಅಶೋಕ ವೃತ್ತದಲ್ಲಿ ಧರಣಿ ನಡೆಸಿ ತಹಶೀಲ್ದಾರ್ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮತ್ತು ಮಾನ್ಯ ಮುಖ್ಯ ನ್ಯಾಯಾಧೀಶರು ಉಚ್ಚ ನ್ಯಾಯಾಲಯ ಬೆಂಗಳೂರು ಇವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಸಾಹಿತಿ ದಾನಪ್ಪ ನಿಲೋಗಲ್ಲ,ಮಲ್ಲಯ್ಯ ಬುಳ್ಳಾ, ಹನುಮಂತಪ್ಪ ವೆಂಕಟಾಪೂರ, ಹನುಮಂತಪ್ಪ ಹಂಪನಾಳ,ಮೌನೇಶ ಮುರಾರಿ, ದೊಡ್ಡ ಕರಿಯಪ್ಪ, ಬಾಲಸ್ವಾಮಿ ಜಿನ್ನಾಪೂರ, ದುರ್ಗಾಪ್ರಸಾದ ತೋರಣದಿನ್ನಿ, ಅಶೋಕ ಮುರಾರಿ, ದುರ್ಗರಾಜ ವಟಗಲ್ಲ, ಹುಚ್ಚ ರೆಡ್ಡಿ ಹಿರೆದಿನ್ನಿ ಸಂತೋಷ್ ಹಿರೆದಿನ್ನಿ, ಬಸಪ್ಪ ಗೌಡನಬಾವಿ, ಮೌನೇಶ್ ಬಳಗಾನೂರ, ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಸೇರಿದಂತೆ ಇನ್ನಿತರರು ಉಪಸ್ಥಿತಿರಿದ್ದರು.
Be the first to comment