ರಾಜ್ಯ ಸುದ್ದಿಗಳು
ದೊಡ್ಡಬಳ್ಳಾಪುರ
ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರರಿಗೆ ಗೌರವ ಕೊಡದ ನ್ಯಾಯಾಧೀಶರ ವಿರುದ್ಧ ಕೆಂಡಾಮಂಡಲವಾದ ಬಹುಜನ ಸಮಾಜ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ರಾಯಚೂರು ಜಿಲ್ಲಾ ನ್ಯಾಯಾಲಯದ ಅಂಗಳದಲ್ಲಿ ಕಳೆದ ಜನವರಿ 26ರಂದು ಸಂವಿಧಾನ ದಿನಾಚರಣೆಯ ಮತ್ತು ಗಣರಾಜ್ಯೋತ್ಸವ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾಕ್ಟರ್ ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ್ದು ಈ ರೀತಿಯ ನ್ಯಾಯಾಧೀಶರ ನಡವಳಿಕೆಯನ್ನು ಬಹುಜನ ಸಮಾಜ ಪಾರ್ಟಿ ಖಂಡಿಸುತ್ತದೆ. ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡರವರನ್ನು ಈ ಕೂಡಲೇ ತಮ್ಮ ಕರ್ತವ್ಯದಿಂದ ವಜಾಗೊಳಿಸಿ ದೇಶದ್ರೋಹ ದಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾಗೋಷ್ಠಿಯಲ್ಲಿ ಬಹುಜನ ಸಮಾಜ ಪಾರ್ಟಿ ಆಗ್ರಹಿಸಿತು. ಮಲ್ಲಿಕಾರ್ಜುನಗೌಡ ಅವರನ್ನು ತಕ್ಷಣ ವಜಾಗೊಳಿಸಿ ಅವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಪವಿಭಾಗಧಿಕಾರಿ ಗಳಾದ ಅರುಣ್ ಕುಮಾರ್ ರವರ ಮೂಲಕ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು ಮಲ್ಲಿಕಾರ್ಜುನ್ ಗೌಡರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ ಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಘಟನೆ ನೆಡೆದು ಇಷ್ಟು ದಿನಗಳಾದರೂ ಯಾವುದೇ ರಾಜಕೀಯ ಪಕ್ಷಗಳು ಈ ಕುರಿತು ಹೇಳಿಕೆಗಳನ್ನು ಕೇವಲ ಬಹುಜನ ಸಮಾಜ ಪಾರ್ಟಿ ಮತ್ತು ಸಂಘ ಸಂಸ್ಥೆ ಗಳು ಮಾತ್ರ ಹೋರಾಟ ಮಾಡುತ್ತಿದ್ದು ಸಂವಿಧಾನ ಬದಲಾಯಿಸುವ ಹುನ್ನಾರ ನೆಡೆದಿದ್ದೆಯಾ ಎಂಬ ಶಂಕೆ ಮೂಡಿದೆ. ರಾಷ್ಟ್ರಪತಿಗಳು ಭಾರತ ಸರ್ಕಾರ ರಾಜ್ಯಪಾಲರು ಕರ್ನಾಟಕ ಸರ್ಕಾರ ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಜಿಲ್ಲಾ ಉಪವಿಭಾಗಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿದ್ದೇವೆ ಈ ಕೂಡಲೇ ನ್ಯಾಯಧೀಶ ಮಲ್ಲಿಕಾರ್ಜುನ್ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಕರ್ನಾಟಕ ರಾಜ್ಯಾದ್ಯಂತ ಬಹುಜನ ಸಮಾಜ ಪಾರ್ಟಿ ವತಿಯಿಂದ ಉಗ್ರ ಹೋರಾಟ ಕೈಗೊಳ್ಳುವುದಾಗಿ ತಿಳಿಸಿದರು . ದೊಡ್ಡಬಳ್ಳಾಪುರ ತಾಲ್ಲೂಕು ಬಿ ಎಸ್ ಪಿ ಉಸ್ತುವಾರಿಗಳಾದ ಕೆ ವಿ ಮುನಿಯಪ್ಪ, ತಾಲ್ಲೂಕು ಅಧ್ಯಕ್ಷರಾದ ಹರೀಶ್ ಜಗನ್ನಾಥ್, ಉಪಾಧ್ಯಕ್ಷರಾದ ಪುಜಪ್ಪ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ನರೇಂದ್ರ ಮೂರ್ತಿ ಸಂಘಟನಾ ಕಾರ್ಯದರ್ಶಿಗಳಾದ ಸುರೇಶ್, ನಗರ ಅಧ್ಯಕ್ಷರಾದ ಶೋಯಬ್ ಖಾನ್ ತಾಲ್ಲೂಕು ಮಹಿಳಾ ಘಟಕ ಮಟ್ಟದ ಉಪಾಧ್ಯಕ್ಷರಾದ ಫಾತಿಮಾ ಹಾಗೂ ತಾಲ್ಲೂಕು ಮತ್ತು ನಗರ ಮಟ್ಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು
Be the first to comment