ದೇಶದ ಆರ್ಥಿಕತೆಯ ಚಿತ್ರಣವನ್ನೇ ಬದಲಿಸುವ ಬಜೆಟ್: ಸಚಿವ ನಿರಾಣಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ರಾಜ್ಯ ಸುದ್ದಿಗಳು

ಜನಪ್ರಿಯ ಬಜೆಟ್ ಎನಿಸಿಕೊಳ್ಳುವ ಹಂಬಲ ಇಲ್ಲ

“ದೇಶದ ಜನರಿಗೆ ಅನುಕೂಲವಾಗುವ ಅದ್ಭುತ ಬಜೆಟ್ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲು ಬಯಸುತ್ತೇನೆ. ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೂ ಮೋದಿ ಸರ್ಕಾರ ಯಾವುದೇ ಕೊಡುಗೆ ನೀಡಿಲ್ಲ. ಜನಪ್ರಿಯ ಬಜೆಟ್ ಎನಿಸಿಕೊಳ್ಳಬೇಕೆಂಬ ಹಂಬಲ ತೊರೆದು, ದೂರದೃಷ್ಟಿಯ ಬಜೆಟ್‌ ಮಂಡಿಸಲಾಗಿದೆ,” ಎಂದು ಹೇಳಿದರು.

ಬೆಂಗಳೂರು:ದೇಶದ ಆರ್ಥಿಕತೆಯ ಚಿತ್ರಣವನ್ನೇ ಬದಲಿಸುವ ಬಜೆಟ್ ಇದು. ಆರ್ಥಿಕತೆಗೆ ಚೈತನ್ಯ ತುಂಬುವ ಜತೆಗೆ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿ ಹೊಂದಿರುವ ಬಜೆಟ್‌ ನೀಡಿರುವ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್‌ ನಿರಾಣಿ ಅಭಿನಂದಿಸಿದ್ದಾರೆ.

ಇಂದಿನ ಕೇಂದ್ರ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕೊವಿಡ್‌ ನಂತರದ ಆರ್ಥಿಕ ಸುಧಾರಣೆ ಮತ್ತು ಉದ್ಯೋಗ ಸೃಷ್ಟಿ ಇಂದಿನ ತುರ್ತು ಅಗತ್ಯತೆ. ಇಂದಿನ ಬಜೆಟ್‌ ಈ ಎಲ್ಲ ಅಂಶಗಳನ್ನು ಒಳಗೊಂಡಿದೆ. 2022ರಲ್ಲಿ ಆರ್ಥಿಕತೆ ಶೇ.9.2ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದ್ದು, ಮುಂದಿನ 25 ವರ್ಷದ ಗುರಿಯಾಗಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ. ಇದರಿಂದ ಕರ್ನಾಟಕದ ಉದ್ಯಮ ಕ್ಷೇತ್ರದ ಬೆಳವಣಿಗೆಗೆ ಇನ್ನೂ ಹೆಚ್ಚಿನ ಅನುಕೂಲ ಆಗಲಿದೆ. ದೇಶದ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ರಾಜ್ಯದ ಪಾಲು ಶೇ.45ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣ ಮತ್ತಷ್ಟು ಏರುವ ವಿಶ್ವಾಸ ಇದೆ ,”ಎಂದು ನಿರಾಣಿ ತಿಳಿಸಿದರು.

“ಸುಲಲಿತ ವ್ಯವಹಾರಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಈಸ್ ಆಫ್‌ ಡೂಯಿಂಗ್‌ ಉದ್ದೇಶದಲ್ಲಿಯೂ ಕೆಲವು ಯೋಜನೆಗಳು ಜಾರಿಯಾಗುತ್ತವೆ. ಏಕಗವಾಕ್ಷಿ ಯೋಜನೆಯಲ್ಲಿ ಜನಕ್ಕೆ ಎಲ್ಲಾ ಸೇವೆ ಅನುಕೂಲವಾಗಲಿದೆ. ಈ ಬಾರಿ ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ 2.O ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ಇದು ದೇಶದ ಆರ್ಥಿಕ ಪ್ರಗತಿಗೆ ದಿಕ್ಸೂಚಿ ಆಗಲಿದೆ,” ಎಂದರು ಮೆಚ್ಚುಗೆ ವ್ಯಕ್ತಪಡಿಸಿದರು.

“ದೇಶದಲ್ಲಿ ‘ಎಲೆಕ್ಟ್ರಿಫೈಡ್ ಇಂಡಿಯಾ’ ಯುಗ ಆರಂಭವಾಗಿದ್ದು, ಪರಿಸರ ಸ್ನೇಹಿ ಇವಿ ವಾಹನಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾಟರಿ ಸ್ವಾಪಿಂಗ್ ಸೌಕರ್ಯ ಕಲ್ಪಿಸುವ ಜತೆಗೆ ಬ್ಯಾಟರಿ ಸ್ವ್ಯಾಪಿಂಗ್‌ಗೆ ನೀತಿ ಜಾರಿ ಮಾಡಾಗುತ್ತದೆ. ಗ್ರೀನ್ ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಉತ್ತೇಜನಕ್ಕಾಗಿ ಯೋಜನೆ ಮಾಡಲಾಗುವುದು ಎಂದು ವಿತ್ತ ಸಚಿವರು ಘೋಷಿಸಿದ್ದಾರೆ. ಇವಿ ಕ್ಷೇತ್ರದಲ್ಲಿ ಇದು ಮಹತ್ವದ ಹೆಜ್ಜೆ ಆಗಲಿದ್ದು, ಕರ್ನಾಟಕವು ಮುಂದಿನ ‘ಪರಿಸರ ಸ್ನೇಹಿ ಕ್ಯಾಪಿಟಲ್‌’ ಆಗುವುದರಲ್ಲಿ ಸಂದೇಹ ಇಲ್ಲ,” ಎಂದರು.

Be the first to comment

Leave a Reply

Your email address will not be published.


*