ಫೆ .07 ರಿಂದ ಆಯವ್ಯಯದ ಪೂರ್ವಭಾವಿ ಸಿದ್ಧತೆ.ಸಿ.ಎಂ ಬಸವರಾಜ ಬೊಮ್ಮಾಯಿ

ವರದಿ ಆಕಾಶ್ ಚಲವಾದಿ ಬೆಂಗಳೂರು ಹೆಡ್

ರಾಜ್ಯ ಸುದ್ದಿಗಳು 

ಬೆಂಗಳೂರು

ಫೆಬ್ರವರಿ 02 : ಫೆಬ್ರವರಿ 07 ರಿಂದ ವ್ಯಯದ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಅವರು ತಿಳಿಸಿದರು.

CHETAN KENDULI

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು. ಸೋಮವಾರ ದೆಹಲಿ ಪ್ರವಾಸ: ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Be the first to comment

Leave a Reply

Your email address will not be published.


*