ಜಿಲ್ಲಾ ಸುದ್ದಿಗಳು
ಇಳಕಲ್: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಸರ್ವ ಸದಸ್ಯರ ವಿಶೇಷ ಮಹಾಸಭೆಯನ್ನು ವರ್ಚುವಲ್ ಹಾಗೂ ವಾಸ್ತವ ವೇದಿಕೆ ಮೂಲಕ ಫೆಬ್ರುವರಿ 20 ರಂದು ಶಿವಮೊಗ್ಗದ ಸಾಗರ ರಸ್ತೆಯ ದ್ವಾರಕಾ ಕನ್ವೆನ್ಷನ್ ಹಾಲ್ ನಲ್ಲಿ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಇಳಕಲ್ ತಾಲ್ಲೂಕು ಅಧ್ಯಕ್ಷ ಪರಶುರಾಮ ಪಮ್ಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಘದ 2012 ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಸದರಿ ದಿನದಂದು ರಾಜ್ಯಾದ್ಯಂತ ಸರ್ಕಾರಿ ನೌಕರರು ಸಹ ಈ ಕೆಳಗಿನ ಲಿಂಕ್ http://us02web.zoom.us/j/81805162152 ಬಳಸಿ ನೇರವಾಗಿ ಭಾಗವಹಿಸಬಹುದಾಗಿದೆ ಹಾಗೂ ಸಂಘದ ಫೇಸ್ ಬುಕ್ ಖಾತೆ http://www.Facebook.com/ksgeaofficial/ ಮೂಲಕ ವಿಕ್ಷಿಸಬಹುದಾಗಿದೆ.
ಕಾರಣ ಇಳಕಲ್ ತಾಲ್ಲೂಕಿನ ಸರ್ಕಾರಿ ನೌಕರರು ಸದರಿ ಸಭೆಯಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment