ಸಚಿವ ಕೋಟ ಅವರ ಮಹತ್ವಕಾಂಕ್ಷಿ ಯೋಜನೆ ‘ಓಬವ್ವ ಆತ್ಮರಕ್ಷಣೆ ಕಲೆ’ಗೆ ಬಾಗಲಕೋಟೆ ಜಿಲ್ಲೆಯಲ್ಲಿ ಫೆ. 7ರಂದು ಚಾಲನೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಕರ್ನಾಟಕ ಸರಕಾರ ‘ಓಬವ್ವ ಆತ್ಮರಕ್ಷಣೆ ಕಲೆ ಯೋಜನೆ’ಯನ್ನು ಪರಿಚಯಿಸುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಬಾಗಲಕೋಟೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಾಗಲಕೋಟೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ವತಿಯಿಂದ ಅನುಷ್ಠಾನಗೊಳ್ಳುವ ಈ ಯೋಜನೆಗೆ ಫೆ. 7ರಂದು ಜಿಲ್ಲೆಯ ಮೂರಾರ್ಜಿ ದೇಸಾಯಿ ವಸತಿಶಾಲೆ ಬೀಳಗಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲರಿಂದ ಚಾಲನೆ ಸಿಗಲಿದೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರ ವಹಿಸಿದ ತಕ್ಷಣ, ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಇಲಾಖಾ ಹಾಸ್ಟೆಲ್‌ಗಳಲ್ಲಿ ಕರಾಟೆ ತರಬೇತಿ ನೀಡುವ ಯೋಜನೆಯ ಕುರಿತು ಪ್ರಸ್ತಾವಿಸಿದ್ದರು. ಅದರಂತೆ ಈಗಾಗಲೇ ರಾಜ್ಯಾದ್ಯಂತ ಪ್ರಾಯೋಗಿಕವಾಗಿ 100 ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ. ಈ ಯೋಜನೆಗೆ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ ಫೆ. 7ರಂದು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕಲೆಯ ತರಬೇತಿ ನೀಡಲು ಮಹಿಳಾ ತರಬೇತುದಾರರನ್ನೇ ನಿಯೋಜಿಸಲಾಗುತ್ತದೆ. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದ ಮಹಿಳಾ ತರಬೇತುದಾರರು ಮಕ್ಕಳನ್ನು ತರಬೇತುಗೊಳಿಸುತ್ತಾರೆ.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರಗೇಶ ನಿರಾಣಿ ವಹಿಸುವರು.ಮುಖ್ಯ ಅತಿಥಿಗಳಾಗಿ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ,ಬೃಹತ್ ಹಾಗೂ ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರ್ಜೋಳ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಸಿದ್ದು ಸವದಿ,ಲೋಕ ಸಭಾ ಸದಸ್ಯ ಪಿ.ಸಿ.ಗದ್ದಿಗೌಡರ,ವಿದಾನ ಪರಿಷತ್ ಸದಸ್ಯರಾದ ಅರುಣ ಶಹಾಪೂರ,ಆರ್.ಬಿ.ತಿಮ್ಮಾಪೂರ, ಹನಮಂತ ನಿರಾಣಿ,ಶಾಸಕರಾದ ಡಾ.ವೀರಣ್ಣ ಚರಂತಿಮಠ,ದೊಡ್ಡನಗೌಡ ಪಾಟೀಲ್, ಸುನೀಲಗೌಡ ಪಾಟೀಲ್,ಆನಂದ ನ್ಯಾಮಗೌಡ, ವಿಧಾನ ಪರಿಷತ್ ಸದಸ್ಯ ಪಿ.ಹೆಚ್.ಪೂಜಾರ, ಬೀಳಗಿ ಪಟ್ಟಣ ಪಂಚಾಯತಿ ಅಧ್ಯಕ್ಷ ಸಂತೋಷ ನಿಂಬಾಳ್ಕರ್,ಉಪಾಧ್ಯಕ್ಷೆ ಶ್ರೀಮತಿ ಯಾಸ್ಮೀನ ಭಾಗವಾನ,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಉಪಸ್ಥಿತರಿರುವರು.

Be the first to comment

Leave a Reply

Your email address will not be published.


*