ಜಿಲ್ಲಾ ಸುದ್ದಿಗಳು
ಮಸ್ಕಿ:
ಜಿಲ್ಲಾ ಬಾಲ ಕಾರ್ಮಿಕ ಯೋಜನಾಧಿಕಾರಿಗಳ ಸಮ್ಮುಖದಲ್ಲಿ ಇಂದು ಮಸ್ಕಿ ಪಟ್ಟಣದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ನಿಲ್ಲಿಸಿ ಮಕ್ಕಳನ್ನು ರಕ್ಷಿಸಿ ಅಭಿಯಾನದಡಿ ಪಟ್ಟಣದ ವಿವಿಧ ಹೋಟೆಲ್ ಮೇಲೆ ದಾಳಿ ಮಾಡುವ ಮೂಲಕ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಜಾಗೃತಿಯನ್ನು ಮೂಡಿಸಲಾಯಿತು.
ಮಸ್ಕಿ ಪಟ್ಟಣದಲ್ಲಿ ಇಂದು ಜಿಲ್ಲಾಡಳಿತ ತಾಲೂಕು ಆಡಳಿತ ಬಾಲಕಾರ್ಮಿಕ ಯೋಜನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಟ್ಟಣದ ಅಂಗಡಿ ಹೋಟೆಲ್ ಗ್ಯಾರೇಜ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ವೇಳೆ ಯಾವುದೇ ಬಾಲಕಾರ್ಮಿಕ ಮಕ್ಕಳು ಕಂಡು ಬಾರದ ಹಿನ್ನೆಲೆಯಲ್ಲಿ ಒಂದು ಅಂಗಡಿ ಮಾಲೀಕರಿಗೆ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳದಂಥ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿದರು.
ದಾಳಿ ವೇಳೆ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ್ ರೆಡ್ಡಿ, ತಾಲೂಕು ಟಾಸ್ಕ್ ಫೋರ್ಸ್ ಕಾರ್ಯದರ್ಶಿ ಮತ್ತು ಕಾರ್ಮಿಕ ನಿರೀಕ್ಷಕ ಜಿ ಬಿ ದೋಸೆದ್, ಪ್ರಬಾರಿ ಕ್ಷೇತ್ರಶಿಕ್ಷಣಾಧಿಕಾರಿ ಬಸಪ್ಪ ತನಿಖೆದಾರ, ಪ್ರೋಗ್ರಾಮ್ ಮ್ಯಾನೇಜರ್ ರವಿಕುಮಾರ್, ಲಿಂಗಸುಗೂರು ಸಿಡಿಪಿಒ ಡಿ. ಆರ್ ಲಲಿತಾ, ಮಕ್ಕಳ ರಕ್ಷಣಾ ಘಟಕ ತಿಕ್ಕಯ್ಯ, ತಹಸೀಲ್ದಾರ್ ಕಚೇರಿಯ ಶಿರಸ್ತೆದಾರ್ ಅಕ್ತರ್ ಅಲಿ ನೇತೃತ್ವದಲ್ಲಿ ದಾಳಿ ಮಾಡಿ ಜಾಗೃತಿ ಮೂಡಿಸಲಾಯಿತು.
Be the first to comment