ಕಾರವಾರ ಚಿತ್ತಾಕುಲ ವ್ಯಾಪ್ತಿಯ ದರ್ಗಾ ಕೆಡವಿದ ಕಿಡಿಗೇಡಿಗಳ ಪತ್ತೆಗೆ 4 ತಂಡ ರಚನೆ- ಎಸ್.ಪಿ ಸುಮನ್ನ ಪನ್ನೆಕರ್

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ಜಿಲ್ಲಾ ಸುದ್ದಿಗಳು 

ಕಾರವಾರ

ತಾಲೂಕಿನ ಚಿತ್ತಾಕುಲ ವ್ಯಾಪ್ತಿಯ ಕಣಸಗೇರಿಯ ಹಜರತ್ ಸಯ್ಯದ್ ಮಾಲ್ದಾರ್ ನೂರ್ ದರ್ಗಾ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿ, ಆರೋಪಿಗಳ ಸೆರೆಗೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೆಕರ್ ತಿಳಿಸಿದ್ದಾರೆ.

CHETAN KENDULI

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದರ್ಗಾದ ಗೋಡೆ ಮತ್ತು ಮಜರ್‍ಗಳನ್ನು ಕಿಡಿಗೇಡಿಗಳು ದುರುದ್ದೇಶ ಪೂರ್ವಕವಾಗಿ ಅಥವಾ ಜಾಗವನ್ನು ಕಬಳಿಸುವ ಉದ್ದೇಶದಿಂದ ಕೆಡವಿ, ಧ್ವಂಸಗೊಳಿಸಿದ್ದಾರೆ. ಈ ಕುರಿತು ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳಲಾಗಿದೆ. ಅಲ್ಲದೇ, ಡಿಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿ, ಮಾಹಿತಿ ಕಲೆ ಹಾಕಲಾಗುತ್ತಿದೆ. ಜಾಗಕ್ಕೆ ಸಂಬಂಧಿಸಿದಂತೆಯೂ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ದುಷ್ಕೃತ್ಯದಲ್ಲಿ ಭಾಗಿಯಾದವರನ್ನು ಶೀಘ್ರದಲ್ಲೇ ಬಂಧಿಸಿ, ತನಿಖೆ ನಡೆಸಲಾಗುತ್ತದೆ ಎಂದರು.

Be the first to comment

Leave a Reply

Your email address will not be published.


*