ರಾಜ್ಯ ಸುದ್ದಿಗಳು
ದೇವನಹಳ್ಳಿ
ತಾಲೂಕಿನ ಬಿದಲೂರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಾಮಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿದ್ದ ಕೋಡಗುರ್ಕಿ ಕೆ.ಮಹೇಶ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಧ್ಯಕ್ಷ ಆಯ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ರಾಮಮೂರ್ತಿ ಅವರನ್ನು ಹೊರತು ಪಡಿಸಿ ಬೇರೆ ಯಾರೂ ನಾಮ ಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಮೋದ್‌ಕುಮಾರ್ ಘೋಷಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ವಿ.ಮಂಜುನಾಥ್ ಮಾತನಾಡಿ, ಸಂಘವು ನೀಡಿರುವ ಜವಬ್ದಾರಿಯನ್ನು ಪ್ರಾಮಾಣಿಕವಾಗಿ ಪಾರದರ್ಶಕವಾಗಿ ನಿರ್ವಹಿಸಬೇಕು. ಯಾವುದೇ ಕಪ್ಪುಚುಕ್ಕೆ ಇಲ್ಲದೆ ಉತ್ತಮ ಆಡಳಿತವನ್ನು ನೀಡುವ ಜವಾಬ್ದಾರಿ ನಿಮ್ಮದಾಗಿದೆ. ಸಂಘದ ಅಭಿವೃದ್ಧಿಗೆ ಎಲ್ಲಾ ನಿರ್ದೇಶಕರುಗಳ ಸಹಕಾರದಲ್ಲಿ ಸಂಘವನ್ನು ಮುನ್ನಡೆಸಿಕೊಂಡು ಹೋಗಬೇಕು ಎಂದು ಸಲಹೆ ಮಾಡಿದರು.
ನೂತನ ಅಧ್ಯಕ್ಷ ರಾಮಮೂರ್ತಿ ಮಾತನಾಡಿ, ಸಂಘದ ವತಿಯಿಂದ ಕೋಡಗುರ್ಕಿ ಗ್ರಾಮದಲ್ಲಿ ಸಂಘದ ಶಾಖಾ ಕೇಂದ್ರ ಪ್ರಾರಂಭಿಸುವುದು ಮತ್ತು ಬಿದಲೂರಿನಲ್ಲಿ ಅಂಗಡಿ ಮಳಿಗೆ ನಿರ್ಮಾಣ ಮಾಡಿ, ಸಂಪನ್ಮೂಲ ಕ್ರೋಢೀಕರಣಕ್ಕೆ ಚಿಂತನೆ ಮಾಡಲಾಗುತ್ತದೆ. ಅವಿರೋಧವಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸಹಕಾರ ಸಂಘದಲ್ಲಿರುವ ಸಕ್ರಿಯ ಹಿರಿಯ ಮುಖಂಡರು, ನಿರ್ದೆಶಕರು ಮಾಜಿ ಅಧ್ಯಕ್ಷರ ಸಲಹೆ ಮಾರ್ಗದರ್ಶನ ಪಡೆದು ಯಾವುದೇ ಕಪ್ಪುಚುಕ್ಕೆ ಬರದ ರೀತಿಯಲ್ಲಿ ಕೆಲಸ ಮಾಡಲಾಗುವುದು. ರೈತರಿಗೆ ಅನುಕೂಲವಾಗಲು ಆರ್ಥಿಕವಾಗಿ ರೈತರು ಸದೃಢರಾಗಲು ಕೆಸಿಸಿ ಸಾಲವನ್ನು ನೀಡಲಾಗುವುದು. ಎಂದರು.
ಈ ವೇಳೆಯಲ್ಲಿ ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಚಿಕ್ಕ ನಾರಾಯಣಸ್ವಾಮಿ, ಬಿದಲೂರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ್, ಉಪಾಧ್ಯಕ್ಷ ರಾಮಸ್ವಾಮಿ, ನಿರ್ದೇಶಕರಾದ ಅಶ್ವಥ್‌ನಾರಾಯಣ,ಕೆ.ಮಹೇಶ್, ಎನ್.ರವಿ, ಲಕ್ಷ್ಮೀನಾರಾಯಣ್, ಮುನಿಕೃಷ್ಣಮ್ಮ, ಆರ್.ತಿಮ್ಮಯ್ಯ, ಶಿವಕುಮಾರ್, ಭಾರತಿ, ಸಹಕಾರ ಸಂಘದ ಮಾಜಿ ಅಧ್ಯಕ್ಷ ರಾಮಾಂಜಿನಪ್ಪ, ಎಂಪಿಸಿಎಸ್ ಅಧ್ಯಕ್ಷ ಲಕ್ಷ್ಮಣ್, ಮುಖಂಡರಾದ ನಂದಕುಮಾರ್, ವೆಂಕಟೇಶ್, ನಾರಾಯಣಸ್ವಾಮಿ, ಮುನಿಶಾಮಪ್ಪ, ಮಂಜುನಾಥ್ , ರಾಜಮ್ಮ, ಮತ್ತಿತರರು ಇದ್ದರು.
Be the first to comment