ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಸರೋಜಿನಿ ನಾಯ್ಡು ಜನ್ಮದಿನಾಚರಣೆಯ ಅಂಗವಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣ ಧಾರವಾಡ ವಲಯವು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯಂಕಂಚಿ ಗ್ರಾಮದ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ರವಿವಾರ ಸರೋಜಿನಿ ನಾಯ್ಡು ಜನ್ಮದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಾಗೂ ಅಪಾರ ಕೊಡುಗೆಗಳನ್ನು ನೀಡಿದ ಮಹಿಳೆಯರ ಕುರಿತು ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಕಸ್ತೂರ ಬಾ ಗಾಂಧಿ ಮಹಿಳಾ ಶಾಲೆಯ ಮುಖ್ಯ ಶಿಕ್ಷಕಿ ಬಸಮ್ಮ ನರಸಾಪೂರ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದರು.
ಪುರಾತತ್ವ ಇಲಾಖೆಯ ಧಾರವಾಡದ ವಲಯದ ಸಹಾಯಕ ಅಧಿಕ್ಷಕ ಡಾ. ದೇವರಾಜ್ ಅವರು ಸರೋಜಿನಿ ನಾಯ್ಡು ಅವರ ಜೀವನ ಮತ್ತು ಸಾಧನೆಗಳನ್ನು ಕುರಿತು ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿನಿಯರು ಸಾಧನೆ ಮಾಡಿದ ಅನೇಕ ಮಹಿಳೆಯರ ಉಡುಪುಗಳನ್ನು ಧರಿಸಿ ಮಾತನಾಡಿದರು ಹಾಗೂ ಕೆಲವು ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಬಾದಾಮಿ ಭಾರತೀಯ ಪುರಾತತ್ವ ಸರ್ವೇಕ್ಷಣ ಉಪ ವಲಯದ ಸಂರಕ್ಷಣಾ ಅಧಿಕಾರಿಗಳಾದ ಮೌನೇಶ ಕುರುವತ್ತಿ ಹಾಗೂ ಪ್ರಶಾಂತ್ ಕುಲಕರ್ಣಿ ಉಪಸ್ಥಿತರಿದ್ದರು.
Be the first to comment