ಕೇರಳದಿಂದ ಗಾಂಜಾ ಸಾಗಾಟ ಮಾಡಿ ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನ ಇಬ್ಬರ ಬಂಧನ

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

 

ಮಂಗಳೂರು

CHETAN KENDULI

ಮಾರಾಟದ ಉದ್ದೇಶದಿಂದ ಕೇರಳದ ಕುಂಜತ್ತೂರು ಪರಿಸರದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಕಾರ್ ವೊಂದನ್ನು ವಶಕ್ಕೆ ಪಡೆದ ಮಂಗಳೂರು ಸಿಸಿಬಿ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ 2.220 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತರನ್ನು‌ ಪ್ರಫುಲ್ ರಾಜ್, ಪ್ರಾಯ(23), ವಾಸ: ಮೂಡಂಬೈಲ್ ಶಾಲೆ ಬಳಿ, ಮಜಿಬೈಲ್ ಅಂಚೆ, ಮಿಂಜ ಗ್ರಾಮ, ಹೊಸಂಗಡಿ, ಮಂಜೇಶ್ವರ, ಕಾಸರಗೋಡು ಜಿಲ್ಲೆ, ಕೇರಳ ಮತ್ತು ಅವಿನಾಶ್, ಪ್ರಾಯ(24), ವಾಸ: ಆಂಬಿತ್ತಡಿ ಮನೆ, ಬೊಳಿಯಾರು, ಸಜಿಪ ಗ್ರಾಮ, ಬಂಟ್ವಾಳ ತಾಲೂಕು‌ ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ :ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ನಾರ್ಲ ಪಡೀಲ್ ರಾಮನಗರ ಎಂಬಲ್ಲಿ ಕಾರಿನಲ್ಲಿ ಅಕ್ರಮ ಮಾದಕ ವಸ್ತುವಾದ ಗಾಂಜಾವನ್ನು ಕೇರಳದಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.

 

ಬಂಧಿತರಿಂದ 2.220 ಕೆಜಿ ತೂಕದ ಗಾಂಜಾ, ನಗದು ರೂ. 1200/- 2 ಮೊಬೈಲ್ ಫೋನ್ ಗಳು ಹಾಗೂ ಮಾರುತಿ ಸ್ವಿಪ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 5,50,400/-ಆಗಬಹುದು‌ ಎಂದು‌ ಅಂದಾಜಿಸಲಾಗಿದೆ.

 ಆರೋಪಿಗಳ ಪೈಕಿ ಅವಿನಾಶ್ ಎಂಬಾತ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಾರಿ ವಾಹನಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಬಗ್ಗೆ ಪೋಲಿಸರು ಮಾಹಿತಿ ನೀಡಿದ್ದಾರೆ.ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

Be the first to comment

Leave a Reply

Your email address will not be published.


*