ಅರಣ್ಯ ಭೂಮಿ ಹಕ್ಕು ೩೦ ವರ್ಷದ ಹೋರಾಟದ ಸ್ಮರಣ ಸಂಚಿಕೆ ; ಅಭಿನಂದನಾರ್ಹ.

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ಜಿಲ್ಲಾ ಸುದ್ದಿಗಳು 

ಶಿರಸಿ

ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸುವ ದಿಶೆಯಲ್ಲಿ ದಾಖಲೆಯೊಂದಿಗೆ ಸ್ಮರಣ ಸಂಚಿಕೆ ಹೊರತಂದಿರುವದು ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ಅವಕಾಶವಾದಾಗ ಜಿಲ್ಲೆಯ ಅರಣ್ಯವಾಸಿಗಳೊಂದಿಗೆ ಭೇಟಿಯಾಗುತ್ತೇನೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ|| ನಿರ್ಮಲಾನಂದನಾಥ ಸ್ವಾಮೀಜಿ ಅವರು ಹೇಳಿದರು.

CHETAN KENDULI

   ಅರಣ್ಯ ಭೂಮಿ ಹಕ್ಕು ೩೦ ವರ್ಷದ ಹೋರಾಟದ ಸ್ಮರಣ-ಸಂಚಿಕೆ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ದಿ. ೧೮ ರಂದು ಮಂಡ್ಯ ಜಿಲ್ಲೆಯ, ನಾಗಮಂಗಲ ತಾಲೂಕಿನ ಆದಿಚುಂಚನಗರಿಯಲ್ಲಿ ಅರ್ಪಿಸಿದ ಸಂದರ್ಭದಲ್ಲಿ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು.

   ರಾಜ್ಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯವಾಸಿಗಳ ಸಮಸ್ಯೆ ಮತ್ತು ಹೋರಾಟದ ವಿವರವನ್ನು ಅಧ್ಯಕ್ಷ ರವೀಂದ್ರ ನಾಯ್ಕ ವಿವರಿಸಿದರು. ಈ ಸಂದರ್ಭದಲ್ಲಿ ಶ್ರೀ ಪ್ರಸನ್ನನಾಥ ಮಹಾಸ್ವಾಮೀಜಿ ಹಾಗೂ ಮಠದ ಅಧಿಕಾರಿಗಳು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*