ರಾಜ್ಯ ಸುದ್ದಿಗಳು
ದೇವನಹಳ್ಳಿ
ರಾಜ್ಯ ಸರಕಾರದಲ್ಲಿ ಸಚಿವ ಸ್ಥಾನದಲ್ಲಿರುವ ಕೆ.ಎಸ್.ಈಶ್ವರಪ್ಪನವರು ಇತ್ತೀಚೆಗೆ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆಯನ್ನು ಕೊಟ್ಟಿರುತ್ತಾರೆ. ಇದು ಅತ್ಯಂತ ಅಪಾಯಕಾರಿ ದೇಶದ್ರೋಹದ ಹೇಳಿಕೆಯಾಗಿದೆ. ಕೂಡಲೇ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ರಾಷ್ಟ್ರ ಧ್ವಜವನ್ನಿಡಿದು ಪ್ರತಿಭಟನೆ ನಡೆಸಿದರು.
ದೇವನಹಳ್ಳಿ ಪಟ್ಟಣದ ತಾಲೂಕು ಆಡಳಿತ ಮುಂಭಾಗದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು ತಾಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ಕೆ.ಎಸ್.ಈಶ್ವರಪ್ಪ ಅವರಿಗೆ ದಿಕ್ಕಾರ ಕೂಗಿದರು. ಕೂಡಲೇ ರಾಷ್ಟ್ರಕ್ಕೆ ಅಪಮಾನ ಎಸಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿರುವುದು ದೇಶದ ಪ್ರಜೆಗಳಿಗೆ ದಿಗ್ಭ್ರಮೆಯಾಗಿದೆ. ಇದನ್ನು ಪ್ರತಿಯೊಬ್ಬರು ವಿರೋಧಿಸುವಂತಹದ್ದು, ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ್ಯ ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನದ ಸಂಕೇತವಾಗಿದೆ ಎಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ಬಿಜೆಪಿ ಸರಕಾರದ ಒಬ್ಬ ಅವಿದ್ಯಾವಂತ ಕ್ಯಾಬಿನೆಟ್ ಮಂತ್ರಿಯಾದಂಹತ ಈಶ್ವರಪ್ಪನವರು ನಮ್ಮ ರಾಷ್ಟ್ರಧ್ವಜವನ್ನು ಇಳಿಸಿ, ಕೇಸರಿ ಧ್ವಜವನ್ನು ಹಾರಿಸುತ್ತೇನೆ ಎಂದು ಹೇಳಿಕೆಕೊಟ್ಟಂತಹ ಮಂತ್ರಿಯನ್ನು ಇಡೀ ರಾಜ್ಯಾದಾದ್ಯಂತ ಕಾಂಗ್ರೆಸ್ ಪಕ್ಷದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಹಶೀಲ್ದಾರ್ ಮುಕೇನ ಗೌವರ್‍ನರ್ ಅವರಿಗೆ ಮನವಿ ಕೊಡಲು ಮನವಿ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.
ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನಕುಮಾರ್ ಮಾತನಾಡಿ, ರಾಜ್ಯದ ಕ್ಯಾಬಿನೆಟ್ ಸಚಿವರಾದ ಈಶ್ವರಪ್ಪ ಅವರ ಮಾತುಗಳನ್ನು ರಾಜ್ಯದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಯಾವುದೇ ಒಂದು ಸ್ಟೇಟ್‌ಮೆಂಟ್ ಮಾಡಬೇಕಾದ್ರೂ ಅರ್ಥವಿಲ್ಲದ ಸ್ಟೇಟ್ಮೆಂಟ್ ಮಾಡ್ತಿದ್ದಾರೆ. ಇಡೀ ದೇಶವೇ ತಲೆತಗ್ಗಿಸುವ ಮಾತನ್ನು ಆಡಿದ್ದಾರೆ. ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸ್ತೀವಿ ಎಂದು ಹೇಳಿದ್ದಾರೆ. ಹಿಂದೂರಾಷ್ಟ್ರ ಮಾಡ್ತೀವಿ, ಇನ್ನೊಂದು ಮಾಡ್ತಿವಿ ಎಂದು ಹೇಳ್ತಿದ್ದಾರೆ. ಆದ್ರೆ, ಜನರಿಗೆ ಇಷ್ಟೂ ಸಮಸ್ಯೆ ಇರುವಾಗ ಅದರ ಬಗ್ಗೆ ಯೋಚಿಸದೆ, ಈ ಭ್ರಷ್ಟ ಈಶ್ವರಪ್ಪ ಹೇಳಿಕೆ ಕೊಟ್ಟಿರುವುದರಿಂದ ತಕ್ಷಣವೇ ಬಿಜೆಪಿ ಸರಕಾರ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಕಿಡಿಕಾರಿದರು.
ಇದೇ ಸಂದರ್ಭದಲ್ಲಿ ತಾಲೂಕು ಆಡಳಿತದ ತಹಶೀಲ್ದಾರ್ ಶಿವರಾಜ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಇನ್ನೂ ಡಿಕೆ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂ.ಎಸ್.ಅಂಗಡಿ, ಮಾಜಿ ಶಾಸಕರಾದ ಮುನಿನರಸಿಂಹಯ್ಯ ಮಾತನಾಡಿದರು. ಈ ವೇಳೆ ವೆಂಕಟಸ್ವಾಮಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತಕುಮಾರ್, ಜಿಲ್ಲಾ ಎಸ್‌ಸಿಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ಮುಖಂಡರಾದ ಸಿ.ಜಗನ್ನಾಥ್, ಚೇತನ್‌ಗೌಡ, ಪುರುಶೋತ್ತಮ್‌ಕುಮಾರ್, ಯುವ ಕಾಂಗ್ರೆಸ್‌ನ ಸಂದೀಪ್, ಆರ್.ಸುಮಂತ್, ಖಾದಿಬೋರ್ಡ್ ಅಧ್ಯಕ್ಷ ನಾಗೇಗೌಡ, ಕುಂದಾಣ ಹೋಬಳಿ ಅಧ್ಯಕ್ಷ ಕೋದಂಡರಾಮು, ದೇವನಹಳ್ಳಿ ತಾಲೂಕು ಕಾಂಗ್ರೆಸ್ ಮುಖಂಡರು, ಮಹಿಳಾ ಮುಖಂಡರು, ಕಾರ್ಯಕರ್ತರು ಇದ್ದರು.
Be the first to comment