ರಾಜ್ಯ ಸುದ್ದಿಗಳು
ದೇವನಹಳ್ಳಿ
ವಿಧಾನಸಭಾ ಕ್ಷೇತ್ರದ ಕುಂದಾಣ ಹೋಬಳಿಯ ಕೊಯಿರ ಗ್ರಾಮದ ದುರ್ಗೆಶ್ ಎಂಬುವವರು ಲಿವರ್ ತೊಂದರೆಯಿಂದಾಗಿ ಬಳಲುತ್ತಿದ್ದರಿಂದ ಚಿಕಿತ್ಸೆಗಾಗಿ ಹೆಚ್ಚುವರಿ ಹಣದ ಅವಶ್ಯಕತೆ ಇದ್ದಿದ್ದರಿಂದ ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತಕುಮಾರ್ ಧನಸಹಾಯ ಮಾಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅನಾರೋಗ್ಯಕ್ಕೆ ತುತ್ತಾಗಿರುವ ಹಲವಾರು ಜನರಿಗೆ ಈಗಾಗಲೇ ಸಾಕಷ್ಟು ಆರ್ಥಿಕ ನೆರವು ನೀಡುವುದರ ಮೂಲಕ ನೆರವಾಗಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್‌ನ ಮುಖಂಡರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಈ ವೇಳೆಯಲ್ಲಿ ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪ್ರಸನ್ನಕುಮಾರ್, ಕುಂದಾಣ ಹೋಬಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋದಂಡರಾಮ್, ಮುಖಂಡರಾದ ಬಿದಲೂರು ಮುನಿರಾಜ್, ಖಾದಿ ಬೋರ್ಡ್ ನಿರ್ದೇಶಕ ಶ್ರೀನಿವಾಸ್, ಮುಖಂಡ ಪ್ರಕಾಶ್, ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.
Be the first to comment