ರಾಜ್ಯ ಸುದ್ದಿಗಳು
ಯಲಹಂಕ
ಯಲಹಂಕ ವಿಧಾನಸಭಾ ಕ್ಷೇತ್ರದ ಸಿಂಗನಾಯಕನಹಳ್ಳಿಯಲ್ಲಿ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಯಲಹಂಕ ಶಾಸಕ ಹಾಗೂ ಬಿಡಿಎ ಅಧ್ಯಕ್ಷರಾದ ಎಸ್ ಆರ್ ವಿಶ್ವನಾಥ್ ಅವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮ ದಲ್ಲಿ ಮಾತನಾಡಿದ ಶಾಸಕರು ಶರಣರ ಸಾಲಿಗೆ ಸೇರಿದ ಆದರ್ಶಮಯ ಮಹಾನ್ ಚೇತನ ಶ್ರೀ ಮಡಿವಾಳ ಮಾಚಿದೇವರಾಗಿದ್ದಾರೆ ಸಹಸ್ರಾರು ವರ್ಷಗಳ ಇತಿಹಾಸವಿರುವ ಮಡಿವಾಳ ಸಮುದಾಯ ರಾಜಕೀಯವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ತುಂಬಾ ಹಿಂದುಳಿದ ಸಮಾಜವಾಗಿದ್ದು ಮುಂದಿನ ದಿನಗಳಲ್ಲಿ ಇಂತಹ ಶೋಷಿತ ಸಮಾಜದ ಜೊತೆಗೆ ನಮ್ಮ ಸರ್ಕಾರ ಸದಾ ನಿಲ್ಲಲಿದೆ ಎಂದರು.
ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಮಡಿವಾಳ ಸಮಾಜಕ್ಕೆ ಸುಮಾರು 50ಲಕ್ಷಗಳ ವೆಚ್ಚದಲ್ಲಿ ಮಾಚಿದೇವರ ಭವನ ನಿರ್ಮಿಸಿ ಕೊಡಲಾಗುವುದು ಎಂದು ಈಗಾಗಲೇ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಭರವಸೆ ನೀಡಿದ್ದರು.ಪ್ರೊಫೆಸರ್ ಅನ್ನಪೂರ್ಣಮ್ಮನವರು ನಡೆಸಿದ ಕುಲಶಾಸ್ತ್ರ ಅಧ್ಯಯನದ ಪ್ರಕಾರ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರ್ಪಡೆ ಮಾಡಬಹುದು ಎಂದು ವರದಿ ನೀಡಲಾಗಿದೆ ಈಗಾಗಲೇ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಶೇಕಡಾ 50ರಷ್ಟು ಮೀರಬಾರದು ಎಂಬ ಆದೇಶ ಇದೆ ಆದ್ದರಿಂದ ಇದರ ಸಾಧಕ ಬಾಧಕಗಳ ಪರಿಶೀಲನೆ ನಡೆಸಿ ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಕ್ಕೆ ಪ್ರಸ್ತಾವನೆ ಸಲ್ಲಿಸಲು ನಮ್ಮ ಬಿಜೆಪಿ ಸರ್ಕಾರ ಸದಾ ಬದ್ಧವಾಗಿದೆ ಎಂದು ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.
Be the first to comment