ಜಿಲ್ಲಾ ಸುದ್ದಿಗಳು
ಬಾಗಲಕೋಟೆ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಕನಿಷ್ಟ 2 ಎಕರೆ ಹಾಗೂ ಗರಿಷ್ಟ 5 ಎಕರೆ ಜಮೀನು ಹೊಂದಿರಬೇಕು. ವಾರ್ಷಿಕ ವರಮಾನ 98 ಸಾವಿರ ರೂ. ಮೀರಬಾರದು. 18 ರಿಂದ 55 ವರ್ಷದೊಳಗಿರಬೇಕು. ಆಧಾರ ಕಾರ್ಡ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮಾರ್ಚ 10 ಆಗಿದೆ. ಅರ್ಜಿ ನಮೂನೆಗಾಗಿ ನಿಗಮದ ವೆಬ್‍ಸೈಟ್‍ನಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿ, ದೂ.ಸಂ.08354-236216ಗೆ ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕ ಕೆ.ಎಂ.ಭಾವಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment