ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವರದಿ: ಚೇತನ ಕೆಂದೂಳಿ, ಸಂಪಾದಕರು

ರಾಜ್ಯ ಸುದ್ದಿಗಳು 

ಬೆಂಗಳೂರು,ಫೆಬ್ರವರಿ 24:

CHETAN KENDULI

ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರು ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ 100 ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತವಾಗಿರಲು ಭಾರತೀಯ ರಾಯಭಾರ ಕಚೇರಿ ಸೂಕ್ತ ಮಾರ್ಗದರ್ಶನವನ್ನು ನೀಡಿದೆ. ವಿಮಾನಗಳು ಪುನ: ಪ್ರಾರಂಭವಾದಾಗ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರ ವಿದೇಶಾಂಗ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಉಕ್ರೇನ್‌ನಲ್ಲಿ ಯುದ್ಧದ ಛಾಯೆಯಿಂದಾಗಿ ಕಳೆದ ವಾರವೇ 200 ಭಾರತೀಯರು ಮರಳಿದ್ದರು. ಆಗ ವಿದ್ಯಾರ್ಥಿಗಳಿಗೆ ಮಾಹಿತಿ ಇರಲಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ವಿದ್ಯಾರ್ಥಿಗಳು ಬ್ಯಾಚ್‌ಗಳಲ್ಲಿ ಭಾರತಕ್ಕೆ ಮರಳುತ್ತಿದ್ದು, ಈ ಬ್ಯಾಚ್ ಕಡೆಯದಾಗಿತ್ತು. ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುವುದು ಎಂದು ತಿಳಿಸಿದರು.

Be the first to comment

Leave a Reply

Your email address will not be published.


*