ಅಧಿಕಾರಿಗಳ ವೇತನ ಸಮಿತಿ ರಚನೆ-ಬಜೆಟ್ ನಲ್ಲಿ ಪ್ರಸ್ತಾಪಿಸುವ ಭರವಸೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ದಿನಾಂಕ 25-02-2022 ರಂದು ಮಾನ್ಯ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾ ದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಡೆದ ಆಯವ್ಯಯದ ಪೂರ್ವಭಾವಿ ಸಭೆ.

2022-23 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಾಕ್ಷರಿ ರವರು ಹಾಗೂ ಪದಾಧಿಕಾರಿಗಳ ನಿಯೋಗವು ಭಾಗವಹಿಸಿ,ಕೇಂದ್ರ ಮಾದರಿಯ ವೇತನ ಜಾರಿ ಹಾಗೂ ಎನ್‌ ಪಿ ಎಸ್ ರದ್ದುಗೊಳಿಸುವ ಸಂಬಂಧ ಅಂಕಿಅಂಶಗಳೊಂದಿಗೆ ಪ್ರಸ್ತಾವನೆಯನ್ನು ಮಂಡಿಸಿದರು.

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಪರಿಷ್ಕರಣೆಗಾಗಿ “ಅಧಿಕಾರಿಗಳ ವೇತನ ಸಮಿತಿ” ರಚಿಸಲು ತಾತ್ವಿಕ ಒಪ್ಪಿಗೆ ಸೂಚಿಸಿ ಆಯವ್ಯಯದಲ್ಲಿ ಪ್ರಸ್ತಾಪಿಸುವ ಭರವಸೆಯನ್ನು ನೀಡಿದರು.

ಇತ್ತೀಚಿಗೆ ರಾಜಸ್ಥಾನ ಸರಕಾರವು ವಿನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಲು ಬಜೆಟ್ ನಲ್ಲಿ ಘೋಷಿಸಿದ್ದು,ಅದರಂತೆ ಅಧ್ಯಯನ ನಡೆಸಿ ಹಳೇ ಪಿಂಚಣೆ ಯೋಜನೆ ಜಾರಿಗೆ ತರುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಮೇಲಿನ ಹಲ್ಲೆಗಳನ್ನು ನಿಯಂತ್ರಿಸಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ತಂದು, ಜಾಮೀನುರಹಿತ ಬಂಧನದಂತಹ ಕಠಿಣ ಕಾನೂನನ್ನು ಜಾರಿಗೆ ತರುವ ಭರವಸೆ ನೀಡಿದರು.

ನೌಕರರ ತರಬೇತಿಗಾಗಿ 6 ಜಿಲ್ಲಾ ತರಬೇತಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಅನುಭವಿ ವಿಷಯ ತಜ್ಞರನ್ನು ನೇಮಿಸುವ ಮೂಲಕ ಪುನಶ್ಚೇತನಗೊಳಿಸುವ ಭರವಸೆ ನೀಡಿದರು.

ಈ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಐ ಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ ಪ್ರಸಾದ್,ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಪಿ ಸಿ ಜಾಫರ್,ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಪಿ ಹೇಮಲತ ರವರು ಉಪಸ್ಥಿತರಿದ್ದರು ಎಂದು ಇಳಕಲ್ ತಾಲ್ಲೂಕು ಅಧ್ಯಕ್ಷರಾದ ಶ್ರೀ ಪರಶುರಾಮ ಎಸ್ ಪಮ್ಮಾರ ಹಾಗೂ ಪದಾಧಿಕಾರಿಗಳು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*