ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ನೌಕರರಿಗೆ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ತಿಳಿಸಿದರು.
ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿಂದು ಜಿಲ್ಲಾ ಪಂಚಾಯತ, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ ಸಹಯೋಗದಲ್ಲಿ ಗ್ರಾಮೀಣಾಭಿವೃದ್ದಿ ಪಂಚಾಯತ ರಾಜ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರ, ಸಾಂಸ್ಕøತಿಕ ಹಾಗೂ ಕ್ರೀಡಾಕೂಟಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಹೆಚ್ಚು ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು. ದೇಶದ ಅಭಿವೃದ್ದಿಗೆ ಗ್ರಾಮೀಣ ಅಭಿವೃದ್ದಿ ಮುಖ್ಯವಾಗಿದ್ದು, ಗ್ರಾಮೀಣ ಅಭಿವೃದ್ದಿಗೆ ಶ್ರಮಿಸುತ್ತಿರುವ ಪಂಚಾಯತರಾಜ್ ಅಭಿವೃದ್ದಿ ಅಧಿಕಾರಿ ಸಿಬ್ಬಂದಿಗಳ ಕಾರ್ಯ ಮುಖ್ಯವಾಗಿದೆ. ಗ್ರಾಮಗಳ ಅಭಿವೃದ್ದಿಗೆ ಸರಕಾರ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಅವುಗಳ ಸಮರ್ಪಕ ಅನುಷ್ಠಾನಗೊಳಿಸಲು ಕಾಲಕಾಲಕ್ಕೆ ತರಬೇತಿ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ ಎಂದರು.
ಬೆಂಗಳೂರಿನ ಕೆ.ಎಸ್.ಪಿ.ಡಿ.ಓ.ಡಬ್ಲು.ಎ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಮುದ್ದೇಬಿಹಾಳದ ಪ್ರಭಾರಿ ಯೋಜನಾಧಿಕಾರಿ ಭೂಬಾಸಿಂಗ್ ಜಾಧವ ಮಾತನಾಡಿ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ತರಬೇತಿ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳು ಅವಶ್ಯವಾಗಿದ್ದು, ಇವು ದೈಹಿಕ ಮತ್ತು ಮಾನಸಿಕವಾಗಿ ಸದೃಡತೆಗೆ ಸಾಕ್ಷಿಯಾಗಿವೆ ಎಂದರು.
ರಾಜ್ಯ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾದ್ಯಕ್ಷರಾದ ರಾಜು ವಾರದ ಮಾತನಾಡಿ ಸತತ ಏಳು ವರ್ಷಗಳಿಂದ ಕ್ಷೇಮಾಭಿವೃದ್ದಿ ಸಂಘ ಪಂಚಾಯತ ರಾಜ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಮಸ್ಯೆಗಳಿಗೆ ಪರಿಹರಿಸುವ ಕಾರ್ಯ ಮಾಡಿದೆ. ಅಧಿಕಾರಿಗಳು ಕಾರ್ಯನಿರ್ವಹಣೆಯ ಪ್ರತಿಯೊಂದು ಕೆಲಸದಲ್ಲಿ ಜಿ.ಪಂ ಸಿಇಓ ಸಹಕಾರ ನೀಡಿದ್ದಾರೆ. ಅಧಿಕಾರಿ ಹಾಗೂ ಸಿಬ್ಬಂದಿಗಳ ಒತ್ತಡ ಕಡಿಮೆಗೊಳಿಸುವ ನಿಟ್ಟಿನಲ್ಲಿ ಇಂತಹ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಪಂ ಉಪಕಾರ್ಯದರ್ಶಿ ಸಿದ್ರಾಮೇಶ್ವರ ಉಕ್ಕಲಿ ಅವರು ದಿನನಿತ್ಯದ ಕೆಲಸದಿಂದ ಒತ್ತಡದ ಜೀವನದಿಂದ ಹೊರಬಂದು ಲವಲವಿಕೆಯಿಂದ ಇರಲು ತರಬೇತಿ, ಸಾಂಸ್ಕøತಿಕ ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ಇಂತಹ ಚಟಿವಟಿಕೆಗಳಲ್ಲಿ ತಾವೆಲ್ಲರೂ ಭಾಗವಹಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಸ್ವಚ್ಛ ಭಾರತ ಮಿಷನ್‍ದಡಿ ಜಾಗೃತಿಯ ವಿಷಯಗಳೊಂಡ ಕ್ಯಾಲೆಂಡರ್ ಹಾಗೂ ಕ್ಷಯ ರೋಗದ ಜಾಗೃತಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಪ್ರಭು ಮಾನೆ, ಕೃಷಿ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಕೊಂಗವಾಡ, ಜಿ.ಪಂ ಸಂಪನ್ಮೂ ಕೇಂದ್ರದ ಅಧಿಕಾರಿ ಬಸವರಾಜ ಶಿರೂರ, ಸಹಾಯಕ ಯೋಜನಾಧಿಕಾರಿ ಬಿ.ಡಿ.ತಳವಾರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಾನಂದ ಕಲ್ಲಾಪೂರ, ಕಿರಣ ಘೋರ್ಪಡೆ, ಮಲ್ಲಿಕಾರ್ಜುನ ಕಲಾದಗಿ, ಸಿದ್ದು ನಕ್ಕರಗುಂದಿ, ಎಸ್.ಬಿ.ಎಂ ಸಮಾಲೋಚಕ ಪಾರ್ಸಿ ಸೇರಿದಂತೆ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ಎಲ್ಲ ವೃಂದದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Be the first to comment