ದೇವನಹಳ್ಳಿ ಪುರಸಭೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ: ಅಧ್ಯಕ್ಷರ, ಉಪಾಧ್ಯಕ್ಷರ ಆಯ್ಕೆ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

 

ದೇವನಹಳ್ಳಿ

CHETAN KENDULI

ಪುರಸಭೆ ಕಾರ್ಯಾಲಯದಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ಅಧ್ಯಕ್ಷ ಸ್ಥಾನಕ್ಕೆ ಜಾತ್ಯತೀತ ಜನತಾದಳದ ಗೋಪಮ್ಮ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ ಗೀತಾ ಶ್ರೀಧರ್ ಆಯ್ಕೆಯಾಗಿದ್ದಾರೆ.ಆಯ್ಕೆ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಪಾಲ್ಗೊಂಡು ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಈ ವೇಳೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಭಾಗಿಯಾಗುವುದರೊಂದಿಗೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಅಭಿನಂದಿಸಿದರು. 

ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಪ್ಪ, ಸದಸ್ಯರಾದ ರವೀಂದ್ರ, ಕೋಮಲಾ ನಟರಾಜ್, ನಾಗೇಶ್, ಚೈತ್ರ ವಿಜಯಕುಮಾರ್, ಮಾಜಿ ಅಧ್ಯಕ್ಷೆ ರೇಖಾ ವೇಣುಗೋಪಾಲ್, ಪುಷ್ಪಲತಾ ಲಕ್ಷ್ಮೀನಾರಾಯಣ್, ಬಾಲರಾಜ್, ಲೀಲಾವತಿ, ರುದ್ರೇಶ್, ಮಂಜುನಾಥ್, ಗೋಪಾಲ್, ರಘು, ಮುನಿಕೃಷ್ಣ, ಮುಖ್ಯಾಧಿಕಾರಿ ನಾಗರಾಜ್ ಸೇರಿದಂತೆ ಸಿಬ್ಬಂದಿ ವರ್ಗ ನೂತನ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಶುಭಕೋರಿದರು. 

ಇನ್ನೂ ಈ ವೇಳೆಯಲ್ಲಿ ಮಾಜಿ ಶಾಸಕ ಕೆ.ವೆಂಕಟಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ಕಾಂಗ್ರೆಸ್‌ನ ಮುಖಂಡರು, ಮುಖಂಡ ಶೆಟ್ಟಿಗೆರೆ ರಾಜಣ್ಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಪಟಾಲಪ್ಪ, ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ಕಾರಹಳ್ಳಿ ಆರ್.ಮುನೇಗೌಡ, ಸೇರಿದಂತೆ ಹಲವಾರು ಸಿಹಿ ಹಂಚಿಕೊಂಡು ಸಂಭ್ರಮಿಸಿದರು. 

ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ, ನಾನು ಅಧ್ಯಕ್ಷನಾಗಿ 2 ತಿಂಗಳಾಯಿತು. ಟೌನ್‌ನಲ್ಲಿನ ರಸ್ತೆಯನ್ನು 3-4 ತಿಂಗಳಲ್ಲಿ ಸರಿಪಡಿಸಲಾಗುತ್ತದೆ. ಎಲ್‌ಇಡಿ ಬೀದಿ ದೀಪ ಸೇರಿದಂತೆ ಹಲವು ಕೆಲಸಗಳು ಇವೆ. ಅವುಗಳನ್ನು ಮಾಡಲಾಗುತ್ತದೆ. ಬಜಾರ್ ರಸ್ತೆಯಿಂದ ವೇಣುಗೋಪಾಲಸ್ವಾಮಿ ದೇಗುಲದವರೆಗೆ ಅಕ್ಕಪಕ್ಕದಲ್ಲಿ 10 ಅಡಿ ರಸ್ತೆ ಅಗಲೀಕರಣ ಮಾಡಬೇಕಾಗುತ್ತದೆ. ಎಲ್ಲೆಂದರಲ್ಲಿ ಬೈಕ್‌ಗಳನ್ನು ನಿಲ್ಲಿಸುತ್ತಿರುತ್ತಾರೆ. ಜನರು ಅರ್ಥ ಮಾಡಿಕೊಂಡು ಹೋಗಬೇಕು ಎಂದರು.

Be the first to comment

Leave a Reply

Your email address will not be published.


*