ರಾಜ್ಯ ಸುದ್ದಿಗಳು
ದೇವನಹಳ್ಳಿ
5 ವರ್ಷ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಪೋಲೀಯೋ ಮುಕ್ತಗೊಳಿಸಲು ಕೈಜೋಡಿಸಬೇಕು ಎಂದು ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಆರ್.ನಾಗೇಶ್ ತಿಳಿಸಿದರು.ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮನದಟ್ಟು ಮಾಡಲು ಪ್ರತಿಯೊಬ್ಬರು ಶ್ರಮಿಸಬೇಕು. ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ಪ್ರತಿ ಪೋಷಕರು ಮುಂದಾಗಬೇಕು. ಅಂಗ ವೈಫಲ್ಯವಾಗದಂತೆ ಪಲ್ಸ್ ಪೋಲಿಯೋ ಲಸಿಕೆ ಸಹಕಾರಿ ಆಗುತ್ತದೆ ಎಂದು ಹೇಳಿದರು.ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರು, ಪಿಎಚ್ಸಿ ವೈದ್ಯೆ ಡಾ. ನೀತು ರಾಣಿ, ಸಿಬ್ಬಂದಿ ಇತರರು ಇದ್ದರು.
Be the first to comment