ಟೀಂ ಇಂಡಿಯಾಗೆ ಬಿಗ್ ಶಾಕ್… ಯುವ ಆಟಗಾರ ಇಶಾನ್ ಕಿಶನ್ ಆಸ್ಪತ್ರೆಗೆ ದಾಖಲು…

ವರದಿ ಆಕಾಶ್ ಚಲವಾದಿ ಬೆಂಗಳೂರು ಹೆಡ್

ರಾಜ್ಯ ಸುದ್ದಿಗಳು 

 

ಧರ್ಮಶಾಲಾ

CHETAN KENDULI

ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆಲುವಿನ ಸಂಭ್ರಮದಲ್ಲಿರುವ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಯುವ ಆಟಗಾರ ಇಶಾನ್ ಕಿಶನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ನಿನ್ನೆ ಧರ್ಮಶಾಲಾದಲ್ಲಿ ಶ್ರೀಲಂಕಾ ವಿರುದ್ಧ 2 ನೇ ಟಿ20 ಪಂದ್ಯ ನಡೆಯಿತು. ಪಂದ್ಯದ ವೇಳೆ ಶ್ರೀಲಂಕಾದ ವೇಗಿ ಲಹಿರು ಕುಮಾರ ಎಸೆದ ಬೌನ್ಸರ್ ಇಶಾನ್ ಕಿಶನ್ ತಲೆಗೆ ಬಡಿದಿತ್ತು. ತಲೆಗೆ ಪೆಟ್ಟು ಬಿದ್ದರೂ ಸಹ ಬ್ಯಾಟಿಂಗ್ ಮುಂದುವರೆಸಿದ ಇಶಾನ್ 16 ರನ್ ಗಳಿಸಿ ಔಟಾಗಿದ್ದರು. ಆ ಬಳಿಕ ತಂಡದ ವೈದ್ಯಕೀಯ ತಂಡ ಅವರನ್ನು ಕಾಂಗ್ರಾದಲ್ಲಿರುವ ಆಸ್ಪತ್ರೆಗೆ ದಾಖಲಿಸಿತ್ತು.

ಇಶಾನ್ ತಲೆಯ ಸಿಟಿ ಸ್ಕ್ಯಾನ್ ಮಾಡಲಾಗಿದ್ದು, ಅವರನ್ನು ಅಬ್ಸರ್ವೇಷನ್ ನಲ್ಲಿ ಇಡಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಇಶಾನ್ ಇಂದಿನ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.ಇಶಾನ್ ಕಿಶನ್ ಲಖನೌನಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ 56 ಬಾಲ್ ಗಳಲ್ಲಿ 89 ರನ್ ಗಳಿಸಿದ್ದರು, ಈ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಟೀಂ ಇಂಡಿಯಾ ಈಗಾಗಲೇ 3 ಪಂದ್ಯಗಳ ಟಿ20 ಸರಣಿಯನ್ನು ಗೆಲುವು ಸಾಧಿಸಿದ್ದು, ಸರಣಿಯಲ್ಲಿ 2-0 ಇಂದ ಮುನ್ನಡೆ ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹಲವು ಬದಲಾವಣೆಗಳನ್ನು ಮಾಡಿ ಯುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

Be the first to comment

Leave a Reply

Your email address will not be published.


*