ರಾಜ್ಯ ಸುದ್ದಿಗಳು
ದೇವನಹಳ್ಳಿ
ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣ ವತಿಯಿಂದ ಜಿಲ್ಲಾ ಮಟ್ಟದ ಕೆಪಿಸಿಸಿ ಸಾಮಾಜಿಕ ಜಾಲತಾಣದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾರ್ಯಾಚರಣೆ ಸಭೆ ನಡೆಯಿತು.ಸಭೆಯಲ್ಲಿ ಬಿಜೆಪಿ ವೈಫಲ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸಾಮಾಜಿಕ ಜಾಲತಾಣವನ್ನು ಯಾವ ರೀತಿ ಬಳಸಿಕೊಳ್ಳಬಹುದು ಎಂಬುವುದರ ಬಗ್ಗೆ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಸಾಮಾಜಿಕ ಜಾಲಾತಾಣದ ರಾಜ್ಯ ಉಪಾಧ್ಯಕ್ಷ ಅಸ್ಲಂ ಮಾತನಾಡಿ, ದೇವನಹಳ್ಳಿ ಕ್ಷೇತ್ರದಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವ ಕೆಲಸವನ್ನು ಪ್ರತಿಯೊಬ್ಬರು ಮಾಡುವಂತಾಗಬೇಕು. ನಮ್ಮ ಹಕ್ಕನ್ನು ನಾವು ಕೇಳುವಂತವರಾಗಬೇಕು. ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರದ ವೈಫಲ್ಯಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಬೂತ್ ಮಟ್ಟದಲ್ಲಿ ಕಮಿಟಿಗಳನ್ನು ರಚಿಸಿಕೊಂಡು ಜನಸಾಮಾನ್ಯರಿಗೆ ತಿಳಿಸುವ ಒಂದು ದಾರಿಯಾಗಿದೆ. ಇದನ್ನು ಸರಿಯಾದ ರೀತಿಯಲ್ಲಿ ಸದ್ಭಳಕೆ ಮಾಡಿಕೊಂಡು ಸರಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಹೇಳಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಗಗನ್ ಮಾತನಾಡಿ, ೨೦೦೮-೦೯ರಾಚೆಗೆ ಕೆಲವೊಂದು ಐಟಿ ಕಂಪನಿಗಳಲ್ಲಿ ಕೆಲಸ ಮಾಡುವವರನ್ನು ಮಾತ್ರ ರಾಜಕೀಯದ ಬಗ್ಗೆ ಅರಿವು ಮೂಡಿಸುವ ಕಾರ್‍ಯ ಮಾಡುತ್ತಿದ್ದರು. ೨೦೧೪ ಚುನಾವಣೆ ಸಾಮಾಜಿಕ ಮಿಡಿಯ ಏನೆಂಬುವುದು ಎಲ್ಲರಿಗೂ ಅರ್ಥವಾಗಿದೆ. ಸಾಮಾಜಿಕ ಜಾಲತಾಣವನ್ನು ಉಪಯೋಗಿಸಿಕೊಂಡು ಜನರ ಹತ್ತಿರ ಬೆಸಯುವ ಕಾರ್‍ಯ ಮಾಡಲಾಗುತ್ತಿದೆ. ಇದನ್ನು ನಮ್ಮ ಪಕ್ಷದಿಂದ ಮಾಡಲು ಪ್ರತಿಯೊಬ್ಬರ ಸಹಕಾರ ಬೇಕು ಎಂದರು.ಈ ವೇಳೆಯಲ್ಲಿ ಬೆಂಗಳೂರು ಗ್ರಾಮಾಂತರ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸಂದೀಪ್, ಪದಾಧಿಕಾರಿಗಳಾದ ವಿನಯ್, ನರಸಿಂಹಮೂರ್ತಿ, ಕಿರಣ್, ಸುರೇಶ್, ಅನಿಲ್, ಮತ್ತಿತರರು ಇದ್ದರು.
Be the first to comment