ರಾಜ್ಯ ಸುದ್ದಿಗಳು
ಮಸ್ಕಿ
ಕಾಂಗ್ರೆಸ್‌ನವರು ವಿಧಾನಸಭೆ ಅಧಿವೇಶನದಲ್ಲಿ ಸದನದ ಕಾರ್ಯ ಕಲಾಪಗಳಿಗೆ ಅಡ್ಡಿ ಪಡಿಸುವ ಮೂಲಕ ಜನ ವಿರೋಧಿ ನೀತಿ ಅನುಸರಿಸಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಶನಿವಾರ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಜನ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆಯಲ್ಲಿ ಮಾತನಾಡಿ ಹಿಜಾಬ್ ವಿಷಯದಲ್ಲಿ ಕಾಂಗ್ರೆಸ್ ವಿಷ ಬೀಜ ಬಿತ್ತಿ ಸಮಾಜದ ಒಡೆಯುವ ಮೂಲಕ ತನ್ನ ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಿದೆ ದೇಶಭಕ್ತಿ ಎಂದರೆ ಏನು ಎಂದು ಗೊತ್ತಿರದ ಕಾಂಗ್ರೆಸ್ ಹಿಜಾಬ್ ವಿಷಯದಲ್ಲಿ ವಿಷ ಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ನ್ಯಾಯಾಲಯದ ಆದೇಶಕ್ಕೂ ಬೆಲೆ ಕೊಡದ ಇವರಿಂದ ಬಿಜೆಪಿ ಪಾಠ ಕಲಿಯಬೇಕಾಗಿಲ್ಲ, ಸಂವಿಧಾನದ ಆಶಯಗಳನ್ನು ಕಾಂಗ್ರೆಸ್ ಗಾಳಿಗೆ ತೋರುತ್ತಿದೆ. ಇವರು ನಿಜವಾದ ಗಾಂಧಿವಾದಿಗಳಲ್ಲ ಎಂದು ಟೀಕಿಸಿದರು.
ವಿಧಾನಸಭೆ ಅಧಿವೇಶನದಲ್ಲಿ ಸದದನದ ಕಾರ್ಯ ಕಲಾಪಗಳಿಗೆ ಅಡ್ಡಿ ಪಡಿಸುವ ಮೂಲಕ ಜನ ವಿರೋಧಿ ನೀತಿ ಅನುಸರಿಸಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಕಾಂಗ್ರೆಸ್ ಯಾವುದೇ ಅಸ್ತ್ರಗಳು ಇಲ್ಲಾ. ಸರ್ಕಾರದ ಸಾಧನೆ ಸಹಿಸದೆ ವಿಧಾನಸಭೆಯ ಕಲಾಪದಲ್ಲಿ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದೆ ಕಲಾಪಕ್ಕೆ ಅಡ್ಡಿ ಪಡಿಸುವ ಮೂಲಕ ಜನ ವಿರೋಧಿ, ಸಂವಿಧಾನ ವಿರೋಧಿ ಕೆಲಸ ಮಾಡಿದ್ದಾರೆ.
ಸಚಿವ ಈಶ್ವರಪ್ಪನವರು ಹೇಳಿಕೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಕಾಂಗ್ರೆಸ್ ಮುಖಂಡರು ಇದನ್ನೇ ತಮ್ಮ ರಾಜಕೀಯಕ್ಕೆ ಬಳಕೆ ಮಾಡಿಕೊಂಡು ಧರಣ ಗದ್ದಲ ಎಬ್ಬಿಸುವ ಮೂಲಕ ಈ ರಾಜ್ಯದ ಜನರಿಗೆ ದ್ರೋಹ ಮಾಡಿದ್ದಾರೆ, ಕಾಂಗ್ರೆಸ್ ಗೆ ಈ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮುಖಂಡ ಬಸವಂತರಾಯ ಕುರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ದೇಶಪಾಂಡೆ, ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಮಾತನಾಡಿದರು.ಮಹಾದೇವಪಗೌಡ ಪೊಲೀಸ್ ಪಾಟೀಲ್, ಮಲ್ಲಪ್ಪ ಅಂಕುಶದೊಡ್ಡಿ, ದೊಡ್ಡಪ್ಪ ಕಡಬೂರು, ಬಸ್ಸಪ್ಪ ಬ್ಯಾಳಿ, ನಾಗರಾಜ ಯಂಬಲದ, ಶರಣಬಸವ ವಕೀಲ, ಶೇಖರಗೌಡ ಮಾಲಿಪಾಟೀಲ್ ಕಾಟಗಲ್, ವೆಂಕಟೇಶ ನಾಯಕ, ಮೌನೇಶ ನಾಯಕ, ಶರಣಯ್ಯ ಸೊಪ್ಪಿಮಠ, ಮಲ್ಲು ಯಾದವ್ ಪಕ್ಷದ ವಿವಿಧ ಮೋರ್ಚಗಳ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
Be the first to comment