ಅಂಗ ವೈಫಲ್ಯವಾಗದಂತೆ ಪಲ್ಸ್ ಪೋಲಿಯೋ ಹನಿ ಸಹಕಾರಿ – ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

 

ದೇವನಹಳ್ಳಿ

CHETAN KENDULI

5 ವರ್ಷ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಪೋಲೀಯೋ ಮುಕ್ತಗೊಳಿಸಲು ಕೈಜೋಡಿಸಬೇಕು ಎಂದು ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ನಾರಾಯಣಸ್ವಾಮಿ ತಿಳಿಸಿದರು.ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಸರ್ಕಾರಿ ಶಾಲೆ ಮತ್ತು ಕುಂದಾಣ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ಪ್ರತಿ ಪೋಷಕರು ಮುಂದಾಗಬೇಕು. ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮನದಟ್ಟು ಮಾಡಲು ಪ್ರತಿಯೊಬ್ಬರು ಶ್ರಮಿಸಬೇಕು. ಅಂಗ ವೈಫಲ್ಯವಾಗದಂತೆ ಪಲ್ಸ್ ಪೋಲಿಯೋ ಲಸಿಕೆ ಸಹಕಾರಿ ಆಗುತ್ತದೆ ಎಂದು ಹೇಳಿದರು.ಈ ವೇಳೆ ಕುಂದಾಣ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವೀಣಾರಾಣಿ ನವೀನ್ ಕುಮಾರ್, ಸದಸ್ಯರು, ಪಿಎಚ್ಸಿ ವೈದ್ಯರು, ಸಿಬ್ಬಂದಿ ಇತರರು ಇದ್ದರು.

Be the first to comment

Leave a Reply

Your email address will not be published.


*