ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…!

ವರದಿ: ಚೇತನ ಕೆಂದೂಳಿ, ಸಂಪಾದಕರು

ರಾಜ್ಯ ಸುದ್ದಿಗಳು 

ಹುಬ್ಬಳ್ಳಿ, ಫೆಬ್ರವರಿ 28:

CHETAN KENDULI

ಮುಂದಿನ ಪೀಳಿಗೆಗೆ ನಾಡಿನ ವೀರ ಮಹಿಳೆಯರಾದ ಬೆಳವಾಡಿ ಮಲ್ಲಮ್ಮ, ಕೆಳದಿ ಚನ್ನಮ್ಮನ ,ಕಿತ್ತೂರು ಚನ್ನಮ್ಮ, ರಾಣಿ ಅಬ್ಬಕ್ಕ ಅವರ ಕುರಿತಾದ ಪಾಠಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳವಡಿ ಮಲ್ಲಮ್ಮ ಮರಾಠಾ ಸೈನ್ಯದ ವಿರುದ್ಧ ಜಯಗಳಿಸಿದ 374 ನೇ ವರ್ಷಾಚರಣೆಗೆ ಚಾಲನೆ ನೀಡಿ ಮಾತನಾಡಿದರು.



ಬೆಳವಡಿಯ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ನಿನ್ನೆ ಕೆಳದಿ ಚನ್ನಮ್ಮ ನ ಪಟ್ಟಾಭಿಷೇಕದ 350 ನೇ ವರ್ಷದ ಆಚರಣೆಯನ್ನೂ ಮಾಡಿದ್ದೇವೆ. ಕರ್ನಾಟಕಕ್ಕೆ ಮಹಿಳೆಯರ ಕೊಡುಗೆ ಅಪಾರವಾಗಿದೆ. ಅದು ಇಂದಿನ ಪೀಳಿಗೆಗೆ ತಿಳಿಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಮೊದಲುಗೊಂಡು ಮಹಿಳೆಯರ ಪಾತ್ರವನ್ನು ಪ್ರಮುಖವಾಗಿ ಯುವಜನಾಂಗ ಕ್ಕೆ ತಿಳಿಸುವ ಕೆಲಸವಾಗಬೇಕು . 

ಮುಂದಿನ ವರ್ಷ ಬೆಳವಡಿಯಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುವುದು ಎಂದರು.

ಈ ಸಂಸ್ಥಾನ ಬೆಳೆದು ಬಂದ ರೀತಿ, ಶಿವಾಜಿ ಮಹಾರಾಜರ ವಿರುದ್ಧ ಅವರ ಹೋರಾಟದ ಬಗ್ಗೆ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳಿಗೆ ಅಪಾರ ಜ್ಞಾನವಿದೆ. ಅವರ ಕಳಕಳಿ, ನಾಡಿನ ಬಗ್ಗೆ ಅವರ ಪ್ರೀತಿಯಿಂದ ಕಾರ್ಯಕ್ರಮ ಆಯೋಜನೆಗೊಂಡಿಗೆ ಎಂದು ಅಭಿನಂದಿಸಿದರು.  

 ಈ ಸಂದರ್ಭದಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಶಾಸಕ ಅರುಣ್ ಶಾಹಪುರ, ಮಾಜಿ ಶಾಸಕ ಮೋಹನ್ ಲಿಂಬಿಕಾಯಿ ಮತ್ತು ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*