ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರ:ವಿದ್ಯಾರ್ಥಿಗಳು ಓದಿನ ವೇಗವನ್ನು ಹೆಚ್ಚಿಸಿಕೊಳ್ಳಿ : ಡಿಸಿ ರಾಜೇಂದ್ರ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ಇಂದಿನ ಆಧುನಿಕ ಯುಗದಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವೇಗವಾಗಿ ಓದಿ, ಗ್ರಹಿಸುವ ಶಕ್ತಿಯನ್ನು ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ನವನಗರದ ಕಲಾಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪ್ರತಿಯೊಂದು ಕೆಲಸಗಳಲ್ಲಿ ಪ್ರತಿಭೆ ಹೊಂದಬೇಕು. ಕಡಿಮೆ ಅವಧಿಯಲ್ಲಿ ಹೆಚ್ಚಿನ ವಿಷಯವನ್ನು ಓದುವ ಮೂಲಕ ಹೆಚ್ಚಿನ ವಿಷಯ ತಿಳಿದುಕೊಳ್ಳುವುದು ಇಂದಿನ ಆಧುನಿಕ ಯುಗದಲ್ಲಿ ಮುಖ್ಯವಾಗಿದೆ ಎಂದರು.

ವಿದ್ಯಾರ್ಥಿಗಳಲ್ಲಿ ನಿರಂತರ ಓದುವ ಕಲೆಯನ್ನು ರೂಡಿಸಿಕೊಳ್ಳಬೇಕು. ಎಲ್ಲರಿಗೂ ಇರುವುದು ಮೆದುಳು ಒಂದೇ. ಓದುವ ಪ್ರತಿಭೆಯನ್ನು ಬೆಳೆಸಿಕೊಳ್ಳುವುದರ ಮೂಲಕ ಜ್ಞಾನಪದಲ್ಲಿ ಇಟ್ಟುಕೊಳ್ಳುವುದು ಹೇಗೆ, ಹೆಚ್ಚಿನ ಗ್ರಹಣ ಶಕ್ತಿ ಪಡೆಯುವುದು, ಗುರಿ ಇಟ್ಟುಕೊಳ್ಳುವ ಬಗ್ಗೆ ಇಂಟರ್ ನ್ಯಾಶನಲ್ ವೇಗದ ಓದು ಮತ್ತು ಶ್ಮರಣ ಶಕ್ತಿ ತರಬೇತುದಾರರಾದ ಮಾರುತಿ ಕುಮಟಾ ಅವರು ತಿಳಿಸಿಕೊಡಲಿದ್ದಾರೆ. ಅವರು 5 ಗಂಟೆಯಲ್ಲಿ 500 ಪುಟಗಳಷ್ಟು ಓದಿ ನೆನಪಿನಲ್ಲಿಟ್ಟುಕೊಳ್ಳುವ ಗ್ರಹಣಶಕ್ತಿ ಬೆಳೆಸಿಕೊಂಡಿದ್ದಾರೆ. ಅವರು ನೀಡುವ ಸಲಹೆಗಳನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಲು ತಿಳಿಸಿದರು.

ಸದರಿ ಕಾರ್ಯಾಗಾರದಲ್ಲಿ ಇಂಟರ್ ನ್ಯಾಶನಲ್ ವೇಗದ ಓದು ಮತ್ತು ಶ್ಮರಣ ಶಕ್ತಿ ತರಬೇತುದಾರರಾದ ಮಾರುತಿ ಕುಮಟಾ ಅವರು ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡಿದರು. ಪಠ್ಯದಲ್ಲಿರುವ ಎಲ್ಲ ವಿಷಯಗಳನ್ನು ಓದಿ ಗ್ರಹಿಸುವ ಶಕ್ತಿ ಪಡೆಯುವ ವಿಧಾನ, ವೇಗವಾಗಿ ಓದುವ ಕಲೆ ಹಾಗೂ ಪರೀಕ್ಷೆಯನ್ನು ಎದುರಿಸುವುದು ಹೇಗೆ ಎಂಬ ಬಗ್ಗೆ ವಿವರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ತಮ್ಮಲ್ಲಿರುವ ಗ್ರಹಣ ಶಕ್ತಿಯ ಬಗ್ಗೆ ವೇದಿಕೆ ಮೇಲೆ ಆಶ್ಚರ್ಯಕರ ಸಂಘತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಓದಿನ ಆಸಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡಿದರು.

ಕಾಯರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಆರ್.ಎಂ.ಎಸ್‍ನ ಉಪ ಸಮನ್ವಯಾಧಿಕಾರಿ ಜಾಸ್ಮೀನ್ ಕಿಲ್ಲೆದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್.ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*