ರಾಜ್ಯ ಸುದ್ದಿಗಳು
ಬೆಂಗಳೂರು
ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಆ ಪ್ರಯುಕ್ತ ರಾಜ್ಯದ ಹಲವು ಭಾಗಗಳಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ.ಇನ್ನು ಮಹಿಳಾ ಸ್ವ-ಸಹಾಯ ಸಂಸ್ಥೆಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಬೊಮ್ಮಾಯಿ ನಿನ್ನೆಯೇ ಚಾಲನೆ ನೀಡಿದ್ರು. 3 ದಿನಗಳ ಕಾಲ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಮೇಳ ಆಯೋಜನೆ ಮಾಡಲಾಗಿದ್ದು, ಮೇಳದಲ್ಲಿ ಇಳಕಲ್ ರೇಶ್ಮೆ ಸೀರೆ, ಗ್ರಾಮೀಣ ಭಾಗದ ಅಹಾರೋತ್ಪನ್ನಗಳು, ಕರಕುಶಲ ವಸ್ತುಗಳು, ಚನ್ನಪಟ್ಟಣ ಗೊಂಬೆ ಸಾಮಗ್ರಿಗಳು ಗಮನ ಸೆಳೆಯುತ್ತಿದೆ.
Be the first to comment