ರಾಜ್ಯ ಸುದ್ದಿಗಳು
ಬೆಂಗಳೂರು
ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧಭೂಮಿಯಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹ ಸಿಕ್ಕಿದೆ ಶವಾಗಾರದಲ್ಲಿ ಇಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಉಕ್ರೇನ್ನಲ್ಲಿ ದಾಳಿಗೆ ಬಲಿಯಾದ ವಿದ್ಯಾರ್ಥಿ ನವೀನ್ ಮೃತದೇಹ ವಾಪಸ್ ತರುವ ಪ್ರಯತ್ನ ನಡೆಯುತ್ತಿದೆ. ವಿದೇಶಾಂಗ ಸಚಿವ ಜಯಶಂಕರ್ ಜೊತೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವೀನ್ ಮೃತದೇಹದ ಮಾರ್ಚರಿಯಲ್ಲಿದೆ. ಇಂಡಿಯನ್ ಎಂಬಿಸಿ ಜೊತೆಯೂ ಮಾತನಾಡಿದ್ದೇನೆ. ಯುದ್ಧ ಇನ್ನೂ ನಡೀತಿದೆ. ರಾಯಭಾರಿ ಕಚೇರಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ ಎಂದರು.
Be the first to comment