ರಾಜ್ಯ ಸುದ್ದಿಗಳು
ಬೆಂಗಳೂರು
ಹಿಜಾಬ್ ವಿವಾದ ತಣ್ಣಗಾದ ಬೆನ್ನಲ್ಲೇ ಪಠ್ಯ ಪರಿಷ್ಕರಣೆ ಚುರುಕಾಗಿದ್ದು, 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ವರ್ಷವೇ ಪರಿಷ್ಕೃತ ಪಠ್ಯ ಸಿಗಲಿದೆ. ಪರಿಷ್ಕೃತ ಪಠ್ಯಕ್ಕೆ ಶಿಕ್ಷಣ ಇಲಾಖೆಯಿಂದ ಭರದ ತಯಾರಿ ನಡೆಸುತ್ತಿದೆ. ಡಾ. ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯ ಪರಿಷ್ಕರಿಸಲಾಗಿತ್ತು, ಬರಗೂರರು ಪರಿಷ್ಕರಿಸಿದ್ದ ಪಠ್ಯಕ್ಕೆ ಶಿಕ್ಷಣ ಇಲಾಖೆಯಿಂದ ಕತ್ತರಿ ಕಾರ್ಯ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಪಠ್ಯ ಪರಿಷ್ಕರಣೆ ಬಗ್ಗೆ ಮಾತನಾಡಿದ ಬಿ.ಸಿ.ನಾಗೇಶ್ ಡಾ.ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪರಿಷ್ಕರಿಸಲಾಗಿತ್ತು. ಆದ್ರೆ, ಬರಗೂರರು ಪರಿಷ್ಕರಿಸಿದ್ದ ಪಠ್ಯದಲ್ಲಿ ಕೆಲ ಲೋಪಗಳಿದ್ದ ಹಿನ್ನೆಲೆಯಲ್ಲಿ ಮತ್ತೆ ಪರಿಷ್ಕರಿಸಲಾಗಿದೆ. ಹೀಗಾಗಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ರಚಿಸಿದ್ದು, ಪಠ್ಯದಲ್ಲಿ ಕೆಲ ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿಸಿದ್ಧಾರೆ.
Be the first to comment