ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ:ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಡಿಸಿ ರಾಜೇಂದ್ರ ಚಾಲನೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿದ್ಯಾಗಿರಿಯ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಂಡ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಉತ್ಪನ್ನಗಳ ಮಾರಾಟ ಮೇಳಕ್ಕೆ ಚಾಲನೆ ನೀಡಿ ವಿವಿಧ ಉತ್ಪನ್ನಗಳ ಮಳಿಗೆಗಳನ್ನು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಉಪಕಾರ್ಯದರ್ಶಿ ಸಿದ್ರಾಮೇಶ್ವರ ಉಕ್ಕಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ ಇದ್ದರು.

ಪ್ರದರ್ಶನದಲ್ಲಿ ಒಟ್ಟು 40 ಮಳಿಗೆಗಳನ್ನು ಹಾಕಲಾಗಿದ್ದು, ಮಹಿಳೆಯರು ಉತ್ಪಾಧಿಸಿದ ಕರಕುಶಲ ವಸ್ತುಗಳು, ಬ್ಯಾಗ್, ವಿವಿಧ ಆಹಾರ ಉತ್ಪನ್ನಗಳು, ಆಟಿಗೆ ಸಾಮಾನುಗಳು, ಇಲಕಲ್ಲ ಸೀರೆ ಸೇರಿದಂತೆ ವಿವಿಧ ತರಹದ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. 2 ಲಕ್ಷದ ವರೆಗೆ ವಿವಿಧ ಉತ್ಪನ್ನಗಳ ಮಾರಾಟವಾಗಿರುವ ಬಗ್ಗೆ ಜಿ.ಪಂ ಯೋಜನಾ ನಿರ್ದೇಶಕ ಎಂ.ವಿ.ಚಳಗೇರಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*