ಲಾವಣ್ಯ ವಿದ್ಯಾ ಸಂಸ್ಥೆಯ ವತಿಯಿಂದ ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸಾಂತ್ವನ

ವರದಿ ಹರೀಶ್ ದೊಡ್ಡಬಳ್ಳಾಪುರ

ರಾಜ್ಯ ಸುದ್ದಿಗಳು 

ಬೆಂಗಳೂರು ಗ್ರಾ 

ಲಾವಣ್ಯ ವಿದ್ಯಾ ಸಂಸ್ಥೆಯಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಕಿರಣ್ ಕುಮಾರ್ ಜಿ. ಹೆಚ್. ಅನಾರೋಗ್ಯದಿಂದಾಗಿ ದಿನಾಂಕ 5/3/2022 ರಂದು ಮೃತಪಟ್ಟಿದ್ದು.ಲಾವಣ್ಯ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಯಶೋದಮ್ಮ ಸಂಸ್ಥೆಯ ಕಾರ್ಯದರ್ಶಿಗಳಾದ ವಿಶ್ವಾಸ್ ಗೌಡ ಹಾಗೂ ಲಾವಣ್ಯ ಪದವಿ ಪೂರ್ವ ಕಾಲೇಜಿನ ಬೋಧಕ ಸಿಬ್ಬಂದಿ ಮೃತ ವಿದ್ಯಾರ್ಥಿ ಕಿರಣ್ ಕುಮಾರ್ ರವರ ಮನೆಗೆ ಭೇಟಿ ನೀಡಿ ನೊಂದ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗ ಮೃತ ವಿದ್ಯಾರ್ಥಿ ಕಿರಣ್ ಕುಮಾರ್ ರವರ ಸಮಾಧಿಯ ಬಳಿ ತೆರಳಿ ಪುಷ್ಪನಮನ ಸಲ್ಲಿಸಿ ವಿದ್ಯಾರ್ಥಿಯನ್ನು ನೆನೆದು ಭಾವುಕರಾದರು.  10ನೇ ತರಗತಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಕಿರಣ್ ಕುಮಾರ್ ಸಹೋದರ ಚರಣ್ ರವರಿಗೆ ಲಾವಣ್ಯ ವಿದ್ಯಾ ಸಂಸ್ಥೆಯಲ್ಲಿ 2 ವರ್ಷಗಳ ಸಂಪೂರ್ಣ ಶಿಕ್ಷಣವನ್ನು ಉಚಿತವಾಗಿ ನೀಡಲು ಲಾವಣ್ಯ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ತೀರ್ಮಾನಿಸಿದೆ. ಕಿರಣ್ ಪೋಷಕರಿಗೆ ತಮ್ಮ ಮಗ ಚರಣ್ ರವರನ್ನು ಲಾವಣ್ಯ ಪದವಿ ಪೂರ್ವ ಕಾಲೇಜಿಗೆ ದಾಖಲು ಮಾಡಲು ಮನವಿ ಮಾಡಲಾಯಿತು.

CHETAN KENDULI

Be the first to comment

Leave a Reply

Your email address will not be published.


*