ಪಂಚರಾಜ್ಯದ ನಾಲ್ಕು ರಾಜ್ಯದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು – ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಿಂದ ಸಿಹಿ ಹಂಚಿ ಸಂಭ್ರಮ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

 

ದೇವನಹಳ್ಳಿ

CHETAN KENDULI

ದೇವನಹಳ್ಳಿ ನಗರದ ಹಳೇ ಬಸ್ ನಿಲ್ದಾಣದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇತ್ತೀಚೆಗೆ ನಡೆದ ಪಂಚರಾಜ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬಾವುಟವನ್ನು ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸುವುದರ ಮೂಲಕ ಹಾರಿಸಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ, ಸಹಿಹಂಚಿಕೊಂಡು ವಿಜಯೋತ್ಸವ ಸಂಭ್ರಮಾರಣೆಯನ್ನು ಮಾಡಿದರು.ರಾಜ್ಯ ಎಸ್‌ಸಿ ಮೋರ್ಚಾ ಖಜಾಂಚಿ ಎ.ಕೆ.ಪಿ.ನಾಗೇಶ್ ಮಾತನಾಡಿ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಹೆಚ್ಚಿನ ಸೀಟುಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದೆ. ಕಾಂಗ್ರೆಸ್ ಮುಕ್ತ ಭಾರತಕ್ಕೆ ಈ ಗೆಲುವು ನಾಂದಿಯಾಗಿದೆ. ಕಾಂಗ್ರೆಸ್‌ನಲ್ಲಿ ಕತ್ತೆ ನಿಲ್ಲಿಸಿದರೂ ಗೆಲ್ಲುತ್ತದೆ ಎಂದು ಹೇಳುತ್ತಾರೆ. ರಾಹುಲ್‌ಗಾಂಧಿ ನಿಂತರೂ ಗೆಲ್ಲುವ ಮಟ್ಟವಿಲ್ಲ. ಆತರಹ ರಾಷ್ಟ್ರೀಯ ನಾಯಕರುಗಳ ನೇತೃತ್ವದಲ್ಲಿ ಗೆಲ್ಲಿಸಿಕೊಂಡು ಬರಲಾಗುತ್ತಿರುವುದು ಅವರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಎಲ್ಲರೂ ಒಗ್ಗೂಡಿ ಸಂಭ್ರಮಾಚರಣೆ ಮಾಡುತ್ತಿದ್ದೇವೆ. ೪೦೩ ಸೀಟುಗಳಿರುವ ಉತ್ತರ ಪ್ರದೇಶದಲ್ಲಿ ಸತತವಾಗಿ ಎರಡನೇ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದೆ. ಗೂಂಡಾರಾಜ್ಯವನ್ನು ರಾಮರಾಜ್ಯದ ಕಡೆಗೆ ಕರೆದುಕೊಂಡು ಹೋಗುತ್ತಿದೆ. ಕಾಂಗ್ರೆಸ್‌ಗೆ ಅಲ್ಲಿ ಇಲ್ಲಿ ಹೇಳಿಕೊಳ್ಳುವಂತೆ ಆಗಿದೆ. ೪೦೩ರಲ್ಲಿ ಒಂದೇ ಒಂದು ಸೀಟು ಮಾತ್ರ ಗೆದ್ದಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಹೇಳಿದರು. ಈ ವೇಳೆಯಲ್ಲಿ ಮಾಜಿ ಶಾಸಕ ಜಿ.ಚಂದ್ರಣ್ಣ, ರೈತಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎಂ.ರವಿಕುಮಾರ್, ತಾಲೂಕು ಅಧ್ಯಕ್ಷ ಸುಂದರೇಶ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ರವಿ, ಮಾಜಿ ಬೈಯಪ್ಪ ಅಧ್ಯಕ್ಷ ಅಶ್ವತ್ಥ್‌ನಾರಾಯಣ್, ಜಿಲ್ಲಾ ಕಾರ್ಯದರ್ಶಿ ಕನಕರಾಜು, ಮಹಿಳಾ ಪದಾಧಿಕಾರಿಗಳು, ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಚೇತನ್, ಬಿಜೆಪಿ ಕಾರ್ಯಕರ್ತರು, ಮುಖಂಡರು ಇದ್ದರು.

Be the first to comment

Leave a Reply

Your email address will not be published.


*