ಜಿಲ್ಲಾ ಸುದ್ದಿಗಳು
ಬಾಗಲಕೋಟೆ :ಜಿಲ್ಲೆಯಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ವಿವ್ಯಾಕ್ಸ ಲಸಿಕೆ ಅಭಿಯಾನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಬುಧವಾರ ಚಾಲನೆ ನೀಡಿದರು.
ನವನಗರದ ಜಿಲ್ಲಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಕಾರ್ವಿವ್ಯಾಕ್ಸ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜಿಲ್ಲೆಯಲ್ಲಿ 12 ರಿಂದ 14 ವರ್ಷದೊಳಗಿನ ಅಂದಾಜು 80 ಸಾವಿರ ಮಕ್ಕಳಿದ್ದು, ಅವರೆಲ್ಲರಿಗೂ ಲಸಿಕೆ ಹಾಕಲಾಗುತ್ತಿದೆ ಎಂದರು.
ಕಾರ್ವಿವ್ಯಾಕ್ಸ ಲಸಿಕೆಯನ್ನು ಎರಡು ಡೋಸ್ ನೀಡಲಾಗುತ್ತಿದೆ. ಒಂದು ತಿಂಗಳ ಅಂತರದಲ್ಲಿ ಇನ್ನೊಂದು ಡೋಸ್ ನೀಡಲಾಗುತ್ತಿದೆ. ಮಕ್ಕಳಿಗೆ ಲಸಿಕೆ ನೀಡಿದ ಮೇಲೆ 15 ನಿಮಿಷಗಳ ಕಾಲ ಲಸಿಕಾ ಕೇಂದ್ರದಲ್ಲಿ ಇರಿಸಿಕೊಂಡು ಕಳುಹಿಸಲಾಗುತ್ತದೆ. ಕಾರ್ವಿ ವ್ಯಾಕ್ಸ ಲಸಿಕೆ ಜಿಲ್ಲೆಗೆ 50 ಸಾವಿರ ಡೋಸ್ ಬಂದಿರುವದಾಗಿ ತಿಳಿಸಿದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಮಕ್ಕಳಿಗೆ ಕಾರ್ವಿವ್ಯಾಕ್ಸ ಲಸಿಕೆ ನೀಡಿದರು. ಮಕ್ಕಳು ಕಡ್ಡಯವಾಗಿ ಲಸಿಕೆ ಪಡೆಯುವಂತೆ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಸೇರಿದಂತೆ ಇತರರು ಉಪಸ್ಥಿತಿತರಿದ್ದರು.
Be the first to comment