ವೇತನ ಆಯೋಗ ರಚನೆ ಸಿಎಂ ಭರವಸೆ-ಇಳಕಲ್ ಸರ್ಕಾರಿ ನೌಕರ ಸಂಘದ ಅಭಿನಂದನೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿಗೆ ತರಲು ವೇತನ ಆಯೋಗ ರಚನೆ ಮಾಡುತ್ತೆನೆ ಎಂದು ಸ್ಪಷ್ಟ ಭರವಸೆ ನೀಡಿದ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ತಾಲೂಕಿನ ಸರಕಾರಿ ನೌಕರ ಸಂಘದ ಅಧ್ಯಕ್ಷರಾದ ಪರಶುರಾಮ ಪಮ್ಮಾರ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ರವರ ಸುದೀರ್ಘವಾದ ಒತ್ತಡ ಹಾಗೂ ಮನವಿಯಂತೆ ವಿಧಾನಸಭೆಯ ಅಧಿವೇಶನದಲ್ಲಿ ಉತ್ತರಿಸುತ್ತ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನವನ್ನು ಜಾರಿಗೆ ತರಲು ವೇತನ ಆಯೋಗ ರಚನೆ ಮಾಡುವ ಸ್ಪಷ್ಟ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.

ಈ ನಿರ್ಧಾರದಿಂದ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರಿಗೆ ಅವಲಂಬಿತರಾದ 30 ಲಕ್ಷ ಕುಟುಂಬದ ಸದಸ್ಯರಿಗೆ ಅನುಕೂಲವಾಗಲಿದೆ. ಸರಕಾರದ ಈ ಒಂದು ನಿರ್ಧಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿ ಪ್ರಥಮ ಹಾಗೂ ಐತಿಹಾಸಿಕವಾಗಿದ್ದು ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯಾಧ್ಯಕ್ಷರಿಗೆ ಇಳಕಲ್ ತಾಲೂಕಿನ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಪಿ ಎಸ್ ಪಮ್ಮಾರ, ಕಾರ್ಯದರ್ಶಿ ಗುಂಡಪ್ಪ ಕುರಿ,ಖಜಾಂಚಿ ಎಂ ಎಚ್ ಗೌಡರ, ಗೌರವಾಧ್ಯಕ್ಷರಾದ ಎಸ್ ಎನ್ ಗಡೇದ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*