ಜಿಲ್ಲಾ ಸುದ್ದಿಗಳು
ಮುAಡಗೋಡ
ರಾಜ್ಯಾದ್ಯಂತ ಅರಣ್ಯ ಭೂಮಿ ಹಕ್ಕಿಗೆ ಸಂಬAಧಿಸಿ ವ್ಯಾಪಕ ಜಾಗೃತ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಅರಣ್ಯವಾಸಿಗಳನ್ನ ಉಳಿಸಿ- ಜಾಥ ಕಾರ್ಯಕ್ರಮ ಏಪ್ರೀಲ್ ೪(ಸೋಮವಾರ) ಬೆಳಿಗ್ಗೆ ೧೦:೦೦ ಕ್ಕೆ ಮುಂಡಗೋಡ ಪ್ರವಾಸಿ ಮಂದಿರದಲ್ಲಿ ಪ್ರಾರಂಭವಾಗಲಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆದ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮ ದಿ. ೪-೪-೨೦೨೨(ಸೋಮವಾರ) ಮುಂಜಾನೆ ೧೦:೦೦ ಗಂಟೆಗೆಪ್ರವಾಸಿ ಮಂದಿರದ ಆವರಣದಿಂದ ನಗರದ ಪ್ರಮುಖ ಬೀದಿ ಮೂಲಕ ದೈವಜ್ಞ ಕಲ್ಯಾಣ ಮಂಟಪದ ವರೆಗೆ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರಣ್ಯವಾಸಿಗಳನ್ನ ಉಳಿಸಿ ಜಾಥವು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ೩೦ ದಿನಗಳಲ್ಲಿ ೨೦೦೦ ಕೀ.ಮೀ ‘ಹೋರಾಟದ ವಾಹನ’ ಸಂಚರಿಸಿ ೫೦೦ ಹಳ್ಳಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಆಸಕ್ತ ಅರಣ್ಯವಾಸಿಗಳು ಹೇಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
Be the first to comment