ಜಿಲ್ಲಾ ಸುದ್ದಿಗಳು
ಲಿಂಗಸಗೂರು
ಲಿಂಗಸುಗೂರು ಪಟ್ಟಣದಲ್ಲಿ ನೂತನ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ. ಕಟ್ಟಡ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದರೂ ಇದುವರೆಗೆ ಉದ್ಘಾಟನೆಯಾಗದಿರುವುದು ಅಸಮಧಾನ ತಂದಿದೆ.ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು, ಸ್ವಚ್ಛತೆ, ಮಹಿಳೆಯರಿಗೆ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ರಾತ್ರಿ ವೇಳೆ ಪುಂಡ ಕಿಡಿಗೇಡಿಗಳು, ಪೋಕರಿಗಳು ಮತ್ತು ಮದ್ಯ ವ್ಯವಸನಿಗಳ ಹಾವಳಿಯಿಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸೂಕ್ತ ಭದ್ರತೆಯಿಲ್ಲದಂತಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ. ಸರಗಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಮಹಿಳೆಯರ ಆಭರಣಗಳ ಮತ್ತು ಜೇಬುಗಳತನ ಹೆಚ್ಚಾಗಿ ಪ್ರಯಾಣಿಕರು ತೀವ್ರ ತೊಂದರೆ ಎದುರಿಸುವಂತಾಗಿದೆ.
ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಸಿಸಿ ಟಿವಿ ಅಳವಡಿಸಬೇಕು. ದಿನದ 24 ಗಂಟೆ ಪೊಲೀಸ್ ಭದ್ರತೆ ಒದಗಿಸಬೇಕು. ಕಿಡಿಗೇಡಿಗಳ ಮತ್ತು ಮದ್ಯ ವ್ಯಸನಿಗಳ ಹಾವಳಿ ನಿಯಂತ್ರಿಸಿ ಪ್ರಯಾಣಿಕರ ಸುರಕ್ಷತೆ ಕಾಪಾಡಬೇಕು, ಅನೈತಿಕ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಮೂಲಕ ಪ್ರಯಾಣಿಕರ ಸುರಕ್ಷತೆ ಕಾಪಾಡಬೇಕು. ಇಲ್ಲದಿದ್ದರೆ ಸಂಘಟನೆಯಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಎಂದು ಲಿಂಗಸುಗೂರ ಸಹಾಯಕ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿದರು ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅದ್ಯೆಕ್ಷರಾದ ರಾಜು ತಂಬಾಕೆ.ಹಾಗೂ ಕರವೇ ಕಾರ್ಯ ಕರ್ತರು ಉಪಸ್ಥಿತರಿದ್ದರು.
Be the first to comment