ವಿವಿಧ ಮಠಗಳ ಶಿಕ್ಷಣ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿಗೆ ಹಣ ಬಿಡುಗಡೆಗೊಳಿಸಿದ ಸಿಎಂ ಬೊಮ್ಮಾಯಿ….!!!ಮುದ್ದೇಬಿಹಾಳ ತಾಲೂಕಿನ ಮಠಕ್ಕೂ ಒಲಿದು ಬಂತು ಅನುದಾನ…!!!

ವರದಿ: ಚೇತನ ಕೆಂದೂಳಿ, ಸಂಪಾದಕರು

ರಾಜ್ಯ ಸುದ್ದಿಗಳು

ಬೆಂಗಳೂರು, ಏಪ್ರಿಲ್:

CHETAN KENDULI

ರಾಜ್ಯದ ಹಿಂದುಳಿದ ದಲಿತ ಸಮಾಜದ ವಿವಿಧ ಮಠಗಳ ಶಿಕ್ಷಣ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿಗೆ ಒಟ್ಟು 119 ಕೋಟಿ ರೂ. ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಅಂಬಿಗ್ ನ್ಯೂಸ್ ಮೀಡಿಯಾಗೆ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್. ಗೋಪಿಚಂದ್ರ ಆದೇಶ ಹೊರಡಿಸಿದ್ದು, ರಾಜ್ಯದ ವಿವಿಧ ಜಿಲ್ಲೆಯ ಹಿಂದುಳಿದ ದಲಿತ ಸಮಾಜದ ವಿವಿಧ ಮಠಗಳ ಶಿಕ್ಷಣ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಆದ್ದೇಶಿಸಿದ್ದಾರೆ.


 

Be the first to comment

Leave a Reply

Your email address will not be published.


*