ಪತಿ ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿಯುತ್ತಲೇ ಪತ್ನಿ 6 ತಿಂಗಳ ಹಸಗೂಸಿನ ಜೊತೆಗೆ ನೇಣಿಗೆ ಶರಣು…!

ವರದಿ: ಗ್ಯಾನಪ್ಪ ದೊಡ್ಡಮನಿ, ಮಸ್ಕಿ

ಜಿಲ್ಲಾ ಸುದ್ದಿಗಳು 

ಲಿಂಗಸಗೂರು:

ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡ ಪತ್ನಿ ತನ್ನ 6 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

CHETAN KENDULI

ಮಂಗಳೂರಿನ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾಧರ ಬಿ. ಕಮ್ಮಾರ(36) ಅವರು ಎ.ಜೆ. ಆಸ್ಪತ್ರೆ ಬಳಿಯ ಕುಂಟಿಕಾನದಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಬೆಂಗಳೂರಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಗಂಗಾಧರ ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪಘಾತದಲ್ಲಿ ಪತಿ ಮರಣ ಹೊಂದಿದ ವಿಷಯ ತಿಳಿಯುತ್ತಲೇ ರಾಯಚೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಶೃತಿ (30) ಅವರು ರಾತ್ರಿ 10 ಗಂಟೆಗೆ ತನ್ನ 6 ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಶ್ರುತಿ ಅವರು ತಮ್ಮನ ಮನೆಯಲ್ಲಿದ್ದರು. ಮನೆಯವರಿಗೆ ವಿಷಯ ತಿಳಿಯುವ ಮೊದಲೇ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆಘಾತ ಮೂಡಿಸಿದೆ. ಆ ಮೂಲಕ ಇಡೀ ಕುಟುಂಬ ಒಂದೇ ದಿನ ಸಾವಿಗೀಡಾದಂತಾಗಿದೆ.

Be the first to comment

Leave a Reply

Your email address will not be published.


*