ರಾಜ್ಯ ಸುದ್ದಿಗಳು
ಬೆಂಗಳೂರು, ಏಪ್ರಿಲ್ 23:
ಕಾಫಿ ಮಂಡಳಿ ಅಧ್ಯಕ್ಷರು ಹಾಗೂ ಚಿಕ್ಕಮಗಳೂರು ಜಿಲ್ಲಾ ಬಿ.ಜೆ.ಪಿ ಮಾಜಿ ಅಧ್ಯಕ್ಷ ಎಂ.ಎಸ್.ಬೋಜೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಘಾತ ವ್ಯಕ್ತಪಡಿಸಿದ್ದಾರೆ.
ಬೋಜೇಗೌಡರು ಚಿಕ್ಕಮಗಳೂರು ಜಿಲ್ಲಾ ಬಿ.ಜೆ.ಪಿಯ ಅಧ್ಯಕ್ಷರಾಗಿ ಸಾಕಷ್ಟು ಸಕ್ರಿಯವಾಗಿ ಕೆಲಸ ಮಾಡಿದ್ದರು. ಅವರ ಆಕಸ್ಮಿಕ ಮರಣ ತೀವ್ರ ದು:ಖ ತಂದಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬದವರಿಗೆ ದು:ಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Be the first to comment